ಬೆಂಗಳೂರಿನ ಯಶವಂತಪುರದ ಮತ್ತಿಕೆರೆಯಲ್ಲಿ ಆಸ್ಪತ್ರೆಗೆ ಬಂದ ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದ ವೈದ್ಯನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಯಶವಂತಪುರದ ಮತ್ತಿಕೆರೆಯಲ್ಲಿರುವ ನ್ಯಾಚುರೋಪತಿ ಮತ್ತು ಅಕ್ಯುಪಂಕ್ಚರ್ ವೈದ್ಯ ವೆಂಕಟರಮಣ ಬಮಧಿತ ಆರೋಪಿ.
ಚಿಕಿತ್ಸೆ ನೆಪದಲ್ಲಿ ವೀಡಿಯೊ ಚಿತ್ರೀಕರಣ ಮಾಡುತ್ತಿದ್ದನೆಂದು ತಿಳಿದ ಮೇಲೆ ವೈದ್ಯನ ಮೊಬೈಲ್ ಪರಿಶೀಲಿಸಿ ಪೊಲೀಸರು ಬಂಧಿಸಿದ್ದಾರೆ. 14 ರಿಂದ 15 ವಯಸ್ಸಿನ ಹೆಣ್ಣುಮಕ್ಕಳ ವೀಡಿಯೊ ಚಿತ್ರೀಕರಣ ಮಾಡುತ್ತಿದ್ದನೆಂದು ತಿಳಿದು ಬಂದಿದೆ.
ಈ ಬಗ್ಗೆ ಯಶವಂತಪುರ ಪೊಲೀಸ್ ಠಾಣೆಗೆ ಮಹಿಳೆಯೊಬ್ಬರು ದೂರು ನೀಡಿದ್ದು, ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಿಸಿಬಿಗೆ ವರ್ಗಾಯಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


