nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    • ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅನುದಾನ ನೀಡದೇ ಬಿಜೆಪಿ ಸರ್ಕಾರ ತಾರತಮ್ಯ ಮಾಡುತ್ತಿದೆ: ಶಾಸಕ ಅನಿಲ್ ಚಿಕ್ಕಮಾದು ಬೇಸರ
    ಜಿಲ್ಲಾ ಸುದ್ದಿ January 28, 2022

    ಅನುದಾನ ನೀಡದೇ ಬಿಜೆಪಿ ಸರ್ಕಾರ ತಾರತಮ್ಯ ಮಾಡುತ್ತಿದೆ: ಶಾಸಕ ಅನಿಲ್ ಚಿಕ್ಕಮಾದು ಬೇಸರ

    By adminJanuary 28, 2022No Comments2 Mins Read
    anil chikkamadu

    ಸರಗೂರು: ಬಿಜೆಪಿ ಸರ್ಕಾರ ಅನುದಾನ ನೀಡುವ ವಿಚಾರದಲ್ಲಿ ಸಾಕಷ್ಟು ತಾರತಮ್ಯ ಮಾಡಿದ್ದು, ನಮ್ಮ ಹಿಂದುಳಿದ ತಾಲ್ಲೂಕಿಗೆ ಅನುದಾನವನ್ನು ನೀಡದೆ,  ನಂಜುಂಡಪ್ಪರವರ ವರದಿಯನ್ನು ಗಾಳಿಗೆ ತೂರಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ಬೇಸರ ವ್ಯಕ್ತಪಡಿಸಿದರು.

    ಸರಗೂರು ತಾಲ್ಲೂಕಿನ ವ್ಯಾಪ್ತಿಯ ಪಟ್ಟಣದ 11ನೇ ಮತ್ತು 5ನೇ ವಾರ್ಡಿನ ಶಾಲಾ ಕಟ್ಟಡ ನಿರ್ಮಾಣ, ಹಳಿಯೂರು, ಲಿಂಗೇನಹಳ್ಳಿ, ವಲ್ಲಹಳ್ಳಿ ರಸ್ತೆ, ಕಾಡಬೇಗೂರು ಲಂಬಾಣಿ ತಾಂಡ ಸಂಪರ್ಕ ರಸ್ತೆ, ಕೆಂಚನಹಳ್ಳಿ ರಸ್ತೆ ಅಭಿವೃದ್ಧಿ, ಕೆಂಪನಹಾಡಿ ಮತ್ತು ಗಂಡತ್ತೂರು ಗ್ರಾಮಗಳಲ್ಲಿ ಲೋಕೋಪಯೋಗಿ ಇಲಾಖೆ ಸುಮಾರು 5ಕೋಟಿ 87ಲಕ್ಷದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಮತ್ತು ಪಂಚಾಯಿತ್ ರಾಜ್ಯ ಇಲಾಖೆಯ ಅನುಧಾನದ ಸುಮಾರು 40 ಲಕ್ಷದ ಅಭಿವೃದ್ಧಿ ಕಾಮಗಾರಿಗಳು ಮತ್ತು ಶಾಸಕರ ಅನುದಾನದ 5 ಲಕ್ಷ ವೆಚ್ಚದ ಸಮುದಾಯ ಭವನ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಿ ಬಳಿಕ ಅವರು ಮಾತನಾಡಿದರು.


    Provided by
    Provided by

    ರಾಜ್ಯದಲ್ಲಿ ಬಿಜೆಪಿ ಸರ್ಕಾರ ಹಿಂದುಳಿದ ತಾಲ್ಲೂಕಾದ ನಮ್ಮ ಕ್ಷೇತ್ರಕ್ಕೆ ಅನುದಾನದ ಹಂಚಿಕೆಯ ವಿಚಾರವಾಗಿ ಸಾಕಷ್ಟು ತಾರತಮ್ಯ ಮಾಡುತ್ತಿದೆ.  ನಮ್ಮ ಕ್ಷೇತ್ರದಲ್ಲಿ ಸುಮಾರು 300-350 ಹಳ್ಳಿಗಳಿವೆ. ಅದರಲ್ಲಿ ಸಾಕಷ್ಟು ಹಳ್ಳಿಗಳು ದೊಡ್ಡ ದೊಡ್ಡ ಗ್ರಾಮಗಳಾದರೆ ಬಹುತೇಕ ಗ್ರಾಮಗಳು ಕಾಡಂಚಿನಲ್ಲಿವೆ.  ಒಂದು ಗ್ರಾಮದ ಸಮಗ್ರ ಅಭಿವೃದ್ಧಿಗೆ 10 ರಿಂದ 15 ಕೋಟಿ ಅನುದಾನದ ಅಗತ್ಯವಿದೆ. ಆದರೆ ಸರ್ಕಾರ ಸರಿಯಾದ ರೀತಿಯಲ್ಲಿ ಅನುದಾನ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ಬಿಜೆಪಿ ಸರ್ಕಾರದಿಂದ ನಮ್ಮಲ್ಲಿರುವ ಯಾವುದೇ ಇಲಾಖೆಗೂ ಸಹ ಸರಿಯಾದ ಅನುದಾನಗಳು ಸಿಗುತ್ತಿಲ್ಲ ಸಾಕಷ್ಟು ಅನುದಾನದ ಕೊರತೆ ಇದೆ. ಆದರೂ ಸಹ ನನ್ನ ಶಕ್ತಿ ಮೀರಿ ಅನುದಾನಗಳನ್ನು ತಂದು ಅಭಿವೃದ್ಧಿಗೆ ಕೆಲಸಗಳನ್ನು ಮಾಡುವ ಪ್ರಯತ್ನ ಮಾಡುತ್ತಿದ್ದೇನೆ ಎಂದರು.

    ಮುಂದಿನ ದಿನಗಳಿಲ್ಲಿ ನಮ್ಮ ಸರ್ಕಾರವೇ ಅಧಿಕಾರಕ್ಕೆ ಬರುವ ಭರವಸೆ 100ಕ್ಕೆ 100ರಷ್ಟಿದೆ. ಆಗ ಮತ್ತಷ್ಟು ಹೆಚ್ಚಿನ ಅನುದಾನವನ್ನು ತಂದು ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಅವರು ಇದೇ ವೇಳೆ ಭರವಸೆ ನೀಡಿದರು.

    ಈ ವೇಳೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನರಸೀಪುರ ರವಿ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಸಿ.ನರಸಿಂಹಮೂರ್ತಿ, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಎಸ್.ರಾಧಿಕಾ, ಮುಖ್ಯಾಧಿಕಾರಿ ಬಿ.ಜಿ.ಸತೀಶ್, ಸದಸ್ಯರಾದ ಶ್ರೀನಿವಾಸ್, ಚಲುವಕೃಷ್ಣ, ಪಿಡಬ್ಲ್ಯೂಡಿ ಇಂಜಿನಿಯರ್‍ ಗಳಾದ ರಾಜಯ್ಯ, ಮಹೇಶ್, ಧ್ರುವರಾಜ್, ಕಾಂಗ್ರೆಸ್ ಮುಖಂಡರಾದ ಎಸ್.ಎಸ್.ಪ್ರಭುಸ್ವಾಮಿ,ಯೂತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು, ಅಶೋಕ್ ಮಂಜುನಾಥ್ ಮೂಳ್ಳೂರು,  ಮಲ್ಲೇಶ್ ಜಕ್ಕಹಳ್ಳಿ, ನಾಗೇಂದ್ರ ನರಸೀಪುರ, ಬಸವರಾಜು ಕಳ್ಳಸೂರು, ಅಶೋಕ್, ಹಾದನೂರು ಪುಟ್ಟಸ್ವಾಮಿ, ಪ್ರಕಾಶ್ ಹೂವಿನಕೊಳ ಮತ್ತಿತರರು ಹಾಜರಿದ್ದರು.

    ವರದಿ: ಚಂದ್ರ ಹಾದನೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ

    March 9, 2026

    ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!

    March 9, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ಔರಾದ್: ತಾಲೂಕಿನ ಕಾಂಗ್ರೆಸ್ ಮುಖಂಡರಾದ ಭೀಮಸೇನರಾವ್ ಸಿಂದೆ ಅವರು ಸಾಮಾಜಿಕ ಬದ್ಧತೆ ಮೆರೆದಿದ್ದಾರೆ. ತಾಲೂಕಿನ ಚಿಕ್ಲಿ (ಜೆ) ಗ್ರಾಮದಲ್ಲಿ ಛತ್ರಪತಿ…

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.