ಬೆಂಗಳೂರು: ತಪ್ಪು ಅರಿವಾದರೆ ಯಾರೇ ಆದರೂ ಸಹ ಪಕ್ಷಕ್ಕೆ ಮರಳಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಪಕ್ಷಕ್ಕೆ ವಾಪಸ್ ಮರಳುವ ವಿಚಾರ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ. ಇದೆಲ್ಲಾ ಕೇಂದ್ರದ ಮಟ್ಟದಲ್ಲಿ ಚರ್ಚೆ ಆಗುವ ವಿಚಾರ ಎಂದರು.
ನಮ್ಮ ಹಂತದಲ್ಲಿ ಚರ್ಚೆ ಆಗಲ್ಲ. ಆದ್ರೆ ಯಾರ್ಯಾರು ತಮ್ಮ ತಪ್ಪನ್ನು ಅರ್ಥ ಮಾಡಿಕೊಂಡು ವಾಪಸ್ ಬರಬೇಕು ಅನ್ಕೊಂಡಿದ್ದಾರೋ ಅವರು ಬರಬಹುದು ಎಂದು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW