ಐಎಎಫ್ ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ, ಭಾರತೀಯ ವಾಯುಪಡೆಯ (ಐಎಎಫ್) ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅವರ ತಂದೆ ತಿಳಿಸಿದ್ದಾರೆ.
ವರುಣ್ ಸಿಂಗ್ ಅವರ ತಂದೆ, ಭೋಪಾಲ್ ನಿವಾಸಿಯಾಗಿದ್ದು, ಅವರು ಸಹ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ತೀವ್ರವಾಗಿ ಗಾಯಗೊಂಡ ಗ್ರೂಪ್ ಕ್ಯಾಪ್ಟನ್ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. “ಅವರನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗುತ್ತಿದೆ. ನಾನು ವೆಲ್ಲಿಂಗ್ಟನ್ ತಲುಪಿದ್ದೇನೆ” ಎಂದು ಅವರು ಸುದ್ದಿ ಸಂಸ್ಥೆಗಳಿಗೆ ತಿಳಿಸಿದ್ದಾರೆ.
ವರುಣ್ ಸಿಂಗ್ ಅವರು ಜನರಲ್ ರಾವತ್ ಅವರೊಂದಿಗೆ ವೆಲ್ಲಿಂಗ್ಟನ್ಗೆ ಪ್ರಯಾಣಿಸುತ್ತಿದ್ದರು, ಅಲ್ಲಿ ಸಿಡಿಎಸ್ ಡಿಫೆನ್ಸ್ ಸರ್ವಿಸಸ್ ಸ್ಟಾಫ್ ಕಾಲೇಜಿನ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲು ನಿಗದಿಯಾಗಿತ್ತು, ಆಗ ತಮಿಳುನಾಡಿನ ಕೂನೂರ್ ಬಳಿ ಚಾಪರ್ ಅಪಘಾತಕ್ಕೀಡಾಯಿತು.
ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಸಿಂಗ್ ಅವರಿಗೆ ತೀವ್ರ ಗಾಯಗಳಾಗಿದ್ದು, ಸದ್ಯಕ್ಕೆ ವೆಂಟಿಲೇಟರ್ ಯಂತ್ರದ ಸಹಾಯದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿವೃತ್ತ ಕರ್ನಲ್ ಅವರು ತಮ್ಮ ಮಗನ ಸ್ಥಿತಿಗೆ ಸಂಬಂಧಿಸಿದಂತೆ “ನನಗೆ ಖಚಿತವಿಲ್ಲ,ಏನನ್ನೂ ಹೇಳಲು ಸಾಧ್ಯವಿಲ್ಲ” ಎಂದು ಹೇಳಿದರು. ಏರ್ ಮಾರ್ಷಲ್ ಮಾನವೇಂದ್ರ ಸಿಂಗ್ ನೇತೃತ್ವದ ತ್ರಿ-ಸೇವಾ ತನಿಖಾ ತಂಡವು ಅಪಘಾತದ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ತಿಗೆ ಮುಂಜಾನೆ ತಿಳಿಸಿದರು.
ವರದಿ: ಆಂಟೋನಿ ಬೇಗೂರು
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 1770