ತಿಪಟೂರು: ಎದುರಿನಿಂದ ಬಂದ ಲಾರಿ ಡಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ಗೂಡ್ಸ್ ಲಾರಿಯೊಂದು ಮಗುಚಿ ಬಿದ್ದ ಘಟನೆ ತಾಲೂಕಿನ ಬೆಣ್ಣೆ ನಳ್ಳಿ ಗೇಟ್ ಬಳಿ ಸೋಮವಾರ ರಾತ್ರಿ ನಡೆದಿದೆ.
ತಾಲೂಕಿನ ಬೆಣ್ಣೆ ನಳ್ಳಿ ಗೇಟ್ ನಿನ್ನೆ ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾಗುವ ಸಾಧ್ಯತೆಗಳಿತ್ತು. ಅಪಘಾತವನ್ನು ತಪ್ಪಿಸುವ ಭರದಲ್ಲಿ ಗೂಡ್ಸ್ ಲಾರಿ ಚಾಲಕ ರಸ್ತೆಯ ಬದಿಗೆ ಲಾರಿಯನ್ನು ತಿರುಗಿಸಿದ್ದು, ಈ ವೇಳೆ ರಸ್ತೆ ಬದಿ ಇದ್ದ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿಯಾಗಿ ಮಗುಚಿ ಬಿದ್ದಿದೆ ಎಂದು ತಿಳಿದು ಬಂದಿದೆ.
ಅಪಘಾತದ ತೀವ್ರತೆಗೆ ವಿದ್ಯುತ್ ಕಂಬ ಮುರಿದು ಗೂಡ್ಸ್ ಲಾರಿ ಮೇಲೆ ಬಿದ್ದಿದ್ದು, ಪರಿಣಾಮವಾಗಿ ಲಾರಿ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಲಾರಿ ಚಾಲಕನಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ.
ವರದಿ: ಮಂಜು ಗುರುಗದಹಳ್ಳಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5