ಚಿತ್ರದುರ್ಗ: ಪಂಕ್ಚರ್ ಆಗಿ ನಿಂತಿದ್ದ ಲಾರಿಗೆ ಗ್ಯಾಸ್ ಟ್ಯಾಂಕರೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ರಾಷ್ಟ್ರೀಯ ಹೆದ್ದಾರಿ 40ರಲ್ಲಿ ನಡೆದಿದೆ.
ಈರುಳ್ಳಿ ಲಾರಿ ಪಂಚರ್ ಆಗಿದ್ದ ಕಾರಣ, ರಸ್ತೆ ಬದಿ ಲಾರಿ ನಿಲ್ಲಿಸಿ ಪಂಕ್ಚರ್ ಹಾಕುತ್ತಿದ್ದ ವೇಳೆ ಹಿಂದಿನಿಂದ ಬಂದ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಪರಿಣಾಮವಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಾಯಚೂರು ಮೂಲದ ಹುಲುಗಪ್ಪ, ಕುಷ್ಟಗಿ ಮೂಲದ ಮಂಜುನಾಥ, ವಿಜಯಪುರ ಮೂಲದ ಕ್ಲೀನರ್ ಸಂಜಯ್, ರೋಣ ಮೂಲದ ಚಾಲಕ ಶರಣಪ್ಪ ಅಪಘಾತದಲ್ಲಿ ಸಾವನ್ನಪ್ಪಿದವರು ಎಂದು ಗುರುತಿಸಲಾಗಿದೆ. ಇವ ಗದಗ ಜಿಲ್ಲೆ ರೋಣದಿಂದ ಬೆಂಗಳೂರಿಗೆ ಈರುಳ್ಳಿ ಸಾಗಿಸುತ್ತಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700