ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋಲಾರದ ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಆನಂದ್, ಕಾಂತರಾಜು, ಪ್ರವೀಣ್, ವೇಣುಗೆ ಜೀವಾವಧಿ ಶಿಕ್ಷೆಗೆ ಗುರಿಯಾದವರು. 2022ರ ಫೆಬ್ರವರಿಯಲ್ಲಿ ನಾಲ್ವರು ಅಪರಾಧಿಗಳು ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ವಿಚಾರಣೆ ನಡೆಸಿದ ಕೋಲಾರದ ಪೋಕ್ಸೋ ವಿಶೇಷ ನ್ಯಾಯಾಲಯ ನ್ಯಾಯಾಧೀಶ ಬಿಪಿ ದೇವಮಾನೆ ಅವರು ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


