ಬೆಂಗಳೂರು: ಸ್ಯಾಂಕಿ ರಸ್ತೆಯ ಭಾಷ್ಯಂ ವೃತ್ತದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜ ಸ್ಮಾರಕದ ಪ್ರತಿಮೆಗೆ ಕಿಡಿಗೇಡಿಗಳು ಮಸಿ ಬಳಿದ ಘಟನೆಗೆ ಸಂಬಂಧಿಸಿದಂತೆ ಸದಾಶಿವನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಸ್ಯಾಂಕಿ ಕೆರೆಗೆ ಹೊಂದಿಕೊಂಡಿರುವ ಉದ್ಯಾನದಲ್ಲಿ ಶಿವಾಜಿ ಪ್ರತಿಮೆ ಇದೆ. ಗುರುವಾರ ರಾತ್ರಿ ಯಾರೋ ಕಿಡಿಗೇಡಿಗಳು ಉದ್ಯಾನದೊಳಗೆ ನುಗ್ಗಿ ಪ್ರತಿಮೆಗೆ ಮಸಿ ಬಳಿದಿದ್ದಾರೆ ಎಂದು ಸದ್ಯ ಹೇಳಲಾಗಿದೆ. ಘಟನೆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಗಸ್ತು ವಾಹನದ ಸಿಬ್ಬಂದಿ ಸ್ಥಳಕ್ಕೆ ಹೋಗಿ ಪರಿಶೀಲಿಸಿದ್ದರು.
ಇನ್ನೂ ಘಟನೆಗೆ ಸಂಬಂಧಿಸಿದಂತೆ ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್ ಹೇಳಿದ್ದಾರೆ. ಸ್ಥಳದಲ್ಲಿ ಬಿಗಿ ಭದ್ರತೆ ಇದೆ. ಸಾರ್ವಜನಿಕರು ಯಾವುದೇ ಗಾಳಿ ಸುದ್ದಿಗಳಿಗೆ ಕಿವಿಗೂಡಬಾರದು ಎಂದು ಅವರು ಹೇಳಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700