ಮಧುಗಿರಿ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ನೀಲಿಹಳ್ಳಿ ಸಮೀಪ ಸೋಮವಾರ ರಾತ್ರಿ ನಡೆದಿದೆ.
ಪಟ್ಟಣದ ಬೂರ್ಕನಹಟ್ಟಿಯ 25 ವರ್ಷ ವಯಸ್ಸಿನ ರಂಜಿತ್ ರಮೇಶ್ ಮೃತಪಟ್ಟವರಾಗಿದ್ದಾರೆ. ಸೋಮವಾರ ರಾತ್ರಿ ವೇಳೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700