ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ(51) ಅವರು ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಗುರುವಾರ ನಿಧನರಾಗಿದ್ದಾರೆ.
ಹಲವು ತಿಂಗಳುಗಳಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಅಪರ್ಣಾ ಅವರು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ(ಜು.11) ನಿಧನರಾಗಿದ್ದು, ಅವರ ಅಗಲಿಕೆಗೆ ಚಿತ್ರರಂಗದ ನಟ–ನಟಿಯರು, ರಾಜಕೀಯ ಗಣ್ಯರು ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.
ಕಳೆದ ಎರಡು ವರ್ಷದ ಹಿಂದೆ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ದೃಢಪಟ್ಟಿತ್ತು. ಇದೇ ಫೆಬ್ರುವರಿ ಬಳಿಕ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸಿದ್ದ ಅಪರ್ಣಾ ಮಜಾ ಟಾಕೀಸ್ ವರು ಪಾತ್ರದಿಂದ ಜನರ ಅಪಾರ ಮೆಚ್ಚುಗೆ ಗಳಿಸಿದ್ದರು. ಅಲ್ಲದೇ ಅನೇಕ ಕಾರ್ಯಕ್ರಮಗಳ ನಿರೂಪಣೆ ಮಾಡುತ್ತಿದ್ದ ಅಪರ್ಣಾ ಅವರ ಕನ್ನಡಕ್ಕೆ ಮನಸೋಲದವರಿಲ್ಲ.
ಅಪರ್ಣಾ 2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್‌ನಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು. ಹಾಗೇ ಸೃಜನ್ ಲೋಕೇಶ್ ನಡೆಸಿಕೊಡುತ್ತಿದ್ದ ‘ಮಜಾ ಟಾಕೀಸ್’ನಲ್ಲಿ ನಟಿಸಿ, ಕಿರುತೆರೆ ವೀಕ್ಷಕರನ್ನು ರಂಜಿಸಿದ್ದರು. ಇದರಲ್ಲಿ ವರಲಕ್ಷ್ಮಿ ಪಾತ್ರದಲ್ಲಿ ಮಿಂಚಿದ್ದರು. ಇವರು ಧ್ವನಿಯನ್ನು ಬಸ್ ನಿಲ್ಧಾಣ ಹಾಗೂ ಮೆಟ್ರೋ ಆರಂಭದ ದಿನಗಳಲ್ಲಿ ಪ್ರಯಾಣಿಕರಿಗೆ ಮಾಹಿತಿ ನೀಡಲು ಬಳಸಿಕೊಳ್ಳಲಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


