ಬೆಳಗಾವಿ : ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಈಗ ರಾಮದುರ್ಗಕ್ಕೂ ನೀರು ನುಗ್ಗಿದೆ ಎಂದು ತಿಳಿದುಬಂದಿದೆ.
ಪಟ್ಟಣದ ಹೊರವಲಯದ ತೇರ ಬಜಾರ್ ನ ನಾಲ್ಕಕ್ಕೂ ಅಧಿಕ ಮನೆಗಳು ಜಲಾವೃತವಾಗಿದ್ದು, ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೊದಲಿನಿಂದಲೂ ನದಿ ತೀರದ ಜನತೆಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂಬ ಒತ್ತಾಯ ಕೇಳಿ ಬಂದಿದ್ದು, ಜನ ಪ್ರತಿನಿಧಿಗಳು, ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy