ತಿಪಟೂರು: ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರು ವ್ಯಾಪಾರ ಮಾಡುವ ಸ್ಥಳಗಳಲ್ಲಿ ಈರುಳ್ಳಿ ಚೀಲಗಳನ್ನು ಇಟ್ಟು ವ್ಯಾಪಾರಕ್ಕೆ ತೊಂದರೆ ನೀಡಲಾಗುತ್ತಿದೆ ಎಂದು ಇಲ್ಲಿನ ವ್ಯಾಪಾರಿಗಳು ಆರೋಪಿಸಿದ್ದು, ಈ ಬಗ್ಗೆ ಸಂಬಂಧಪಟ್ಟವರಿಗೆ ಹಲವು ಬಾರಿ ಮನವಿ ಮಾಡಿದರೂ ಅವರು ಕ್ರಮಕೈಗೊಳ್ಳುತ್ತಿಲ್ಲ ಎಂಬ ಆಕ್ರೋಶ ಕೇಳಿ ಬಂದಿದೆ.
ರೈತರು ತಾವು ಬೆಳೆದ ಬೆಳೆಗಳನ್ನು ತಂದು ವ್ಯಾಪಾರ ಮಾಡುತ್ತಿರುವ ಸ್ಥಳದಲ್ಲಿ ಕೊಳೆತ ಈರುಳ್ಳಿಗಳನ್ನು ರಾಶಿ ಹಾಕಲಾಗಿದ್ದು, ಇದರಿಂದಾಗಿ ವ್ಯಾಪಾರ ಮಾಡಲು ಅನಾನುಕೂಲವಾಗಿದೆ. ಈರುಳ್ಳಿ ಕೊಳೆತು ದುರ್ವಾಸನೆ ಹರಡಿದ್ದು, ಮಾರುಕಟ್ಟೆಗೆ ಆಗಮಿಸುತ್ತಿರುವ ಗ್ರಾಹಕರು ಕೂಡ ಛೀ. ಥೂ ಎನ್ನುವಂತಾಗಿದೆ.
ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ದಿನೇ ದಿನೇ ಮಧ್ಯವರ್ತಿಗಳ ಕಾಟ ಕೂಡ ಹೆಚ್ಚಾಗುತ್ತಿದೆ ಎನ್ನುವ ಆರೋಪಗಳು ಕೇಳಿ ಬಂದಿದ್ದು, ಇನ್ನೊಂದೆಡೆ ವ್ಯಾಪಾರ ಮಾಡಲು ಕೂಡ ಅನಾನುಕೂಲ ಸೃಷ್ಟಿಯಾಗುತ್ತಿರುವುದರಿಂದಾಗಿ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಅವ್ಯವಸ್ಥೆಯ ಸಂಬಂಧ ಎಪಿಎಂಸಿ ಅಧ್ಯಕ್ಷ ದಿವಾಕರ್ ಅವರಿಗೆ ದೂರು ನೀಡಿದರೂ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ರೈತರು ಬೇಸರ ವ್ಯಕ್ತಪಡಿಸಿದ್ದು, ತಕ್ಷಣವೇ ಈ ಸಂಬಂಧ ಕ್ರಮಕೈಗೊಳ್ಳಬೇಕು. ಇಲ್ಲವಾದರೆ ಎಪಿಎಂಸಿ ಮುಂದೆ ತೀವ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.
ವರದಿ: ಮಂಜು ಗುರುಗದಹಳ್ಳಿ
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700