ಕಾವೇರಿ ಜಲಸಂಕಷ್ಟ, ಜನರ ಆತಂಕ ನಿವಾರಿಸಲು ಕೂಡಲೇ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯುವಂತೆ ಸರ್ಕಾರಕ್ಕೆ ಸೂಚಿಸಲು ರಾಜ್ಯಪಾಲರಿಗೆ ಕರ್ನಾಟಕ ಜಲಸಂರಕ್ಷಣಾ ಸಮಿತಿ ನಿಯೋಗ ಮನವಿ ಮಾಡಿದೆ.
ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರನ್ನು ಕುರಬೂರು ಶಾಂತಕುಮಾರ್ ನೇತೃತ್ವದ ನಿಯೋಗ ಭೇಟಿ ಮಾಡಿ, ಮನವಿಯನ್ನು ಸಲ್ಲಿಸಿದೆ.
ಕುಡಿಯುವ ನೀರಿನ ಆತಂಕವಿರುವ ಕಾರಣ ತಮಿಳುನಾಡಿಗೆ ಹರಿಸುವ ನೀರು ನಿಲ್ಲಿಸಲಾಗುತ್ತದೆ ಎಂಬ ನಿರ್ಣಯ ಕೈಗೊಳ್ಳಲು ಸರ್ಕಾರಕ್ಕೆ ಸೂಚಿಸಬೇಕು ಎಂದು ಕೋರಿದೆ.


