nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ

    May 16, 2026

    ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು

    May 16, 2026

    ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!

    May 16, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
    • ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
    • ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
    • ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
    • ಮಧುಗಿರಿ:  ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
    • ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
    • ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
    • ಗುರು ಶಿಷ್ಯರು: ಈ ದಿನದ ಕಥೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
    ತುಮಕೂರು May 16, 2026

    ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ

    By adminMay 16, 2026No Comments2 Mins Read
    tumkur

    ತುಮಕೂರು: ನಗರಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಜಿಲ್ಲೆಯ ರೈತರ ಮತ್ತು ವಿವಿಧ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲು ರೈತ ಸಂಘ ತೀರ್ಮಾನಿಸಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಟಿ. ಆರ್. ಯೋಗೇಶ್ ಹೇಳಿದರು.

    ನಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯ ವಿವಿಧ ಸಮಸ್ಯೆಗಳ ಬಗ್ಗೆ ಹಲವಾರು ಬಾರಿ ಸಚಿವ ಜಿ.ಪರಮೇಶ್ವರ್ ಸೇರಿದಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ.


    Provided by
    Provided by

    ಜಿಲ್ಲೆಯಲ್ಲಿ ಸಾವಿರಾರು ಕೋಟಿ ರೂ. ಅನುದಾನ ತಂದು ನೀರಾವರಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಸರ್ಕಾರ ಹೇಳುತ್ತಿದ್ದರೂ, ಅನೇಕ ಗ್ರಾಮಗಳಲ್ಲಿ ಇನ್ನೂ ಕುಡಿಯುವ ನೀರಿನ ಸಮಸ್ಯೆ ಮುಂದುವರಿದಿದೆ. ಎತ್ತಿನಹೊಳೆ ಯೋಜನೆ ಪೂರ್ಣಗೊಂಡಿದೆ ಎನ್ನಲಾಗುತ್ತಿದ್ದರೂ, ಹಲವೆಡೆ ಟ್ಯಾಂಕರ್ ಮೂಲಕ ನೀರು ಪೂರೈಸುವ ಸ್ಥಿತಿ ನಿರ್ಮಾಣವಾಗಿದೆ. ಬರಗಾಲದ ಪರಿಣಾಮ ಜಿಲ್ಲೆಯ ತೆಂಗು, ಅಡಿಕೆ ಸೇರಿದಂತೆ ವಾಣಿಜ್ಯ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, ಜಿಲ್ಲಾಡಳಿತ ಇದುವರೆಗೆ ಸಮಗ್ರ ಸರ್ವೆ ನಡೆಸಿಲ್ಲ. ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಪಿಎಸ್ಸಿ ಮಾದರಿ ಶಾಲೆಗಳನ್ನು ಆರಂಭಿಸಬೇಕು. ನಗರದ ದೇವರಾಜ್ ಅರಸ್ ಬಸ್ ಸ್ಟ್ಯಾಂಡ್ ಕಚೇರಿಯಲ್ಲಿ ಎಸ್ಕಲೇಟರ್ ಒಂದು ತಿಂಗಳಿಂದ ಕೆಟ್ಟು ನಿಂತಿದ್ದು, ಅಂಗವಿಕಲರ ಸೌಲಭ್ಯಗಳ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ತುರುವೇಕೆರೆಯಲ್ಲಿ ರಾಗಿ ಖರೀದಿ ಕೇಂದ್ರಗಳಲ್ಲಿ ನಕಲಿ ಐಡಿ ಸೃಷ್ಟಿಸಿ ರಾಗಿ ಮಾರಾಟ ಮಾಡುವ ಜಾಲ ಕಾರ್ಯನಿರ್ವಹಿಸುತ್ತಿದ್ದು, ಅದನ್ನು ಪತ್ತೆ ಹಚ್ಚುವಲ್ಲಿ ಅಧಿಕಾರಿಗಳು ವಿಫಲಾಗಿದ್ದಾರೆ ಆಕ್ರೋಶ ವ್ಯಕ್ತಪಡಿಸಿದರು.

    ಸಚಿವ ಕೃಷ್ಣ ಬೈರೇಗೌಡ ಅವರು ಸಭೆಗಳಲ್ಲಿ ಪರಿಹಾರ ಹಾಗೂ ದುರಸ್ತಿ ಕಾರ್ಯಗಳ ಬಗ್ಗೆ ಭರವಸೆ ನೀಡುತ್ತಿದ್ದರೂ, ಕೋಡಿ ಹಾನಿಗೊಳಗಾದ ರೈತರಿಗೆ ಒಂಬತ್ತು ತಿಂಗಳಾದರೂ ಪರಿಹಾರ ದೊರೆತಿಲ್ಲ. ಕಂದಾಯ ಇಲಾಖೆ ಸಂಪೂರ್ಣ ವಿಫಲವಾಗಿದ್ದು, ತಹಶೀಲ್ದಾರ್‌ಗಳು ಕೇವಲ ಪ್ರಗತಿ ವರದಿ ತೋರಿಸುತ್ತಿದ್ದಾರೆ ಹೊರತು ರೈತರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಮುಂದುವರಿದಿದೆ. ಈ ಕುರಿತು ಮೇ.20ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಎಲ್ಲಾ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲಾಗುವುದು. ಸೂಕ್ತ ಕ್ರಮ ಕೈಗೊಳ್ಳದಿದ್ದರೆ ರಸ್ತೆ ತಡೆ ಹೋರಾಟ ನಡೆಸಲಾಗುವುದು ಎಂದು ಜಿಲ್ಲಾಡಳಿತಕ್ಕೆ ಎಚ್ಚರಿಸಿದರು.

    ಈ ಸಂದರ್ಭದಲ್ಲಿ ನಟರಾಜ್ ಮಾತನಾಡಿ, ರೈತರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಎಂದು ಆರೋಪಿಸಿದರು. ದಿನಕ್ಕೆ 6 ಗಂಟೆಗಳ ಕಾಲವೂ ನಿರಂತರ ವಿದ್ಯುತ್ ನೀಡದೆ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ, ರೈತರ ಮಕ್ಕಳಿಗೂ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

    ಈ ಸಂದರ್ಭದಲ್ಲಿ ಚಂದ್ರಶೇಖರ್ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗಾಗಿ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಡೆಸಬೇಕು ಎಂದು ಒತ್ತಾಯಿಸಿದರು. ಜೊತೆಗೆ, ಭೂಮಿ ಕಳೆದುಕೊಳ್ಳುತ್ತಿರುವ ಎಲ್ಲರಿಗೂ ಏಕರೂಪದ ಮತ್ತು ನ್ಯಾಯಸಮ್ಮತ ಪರಿಹಾರವನ್ನು ನೀಡಬೇಕು ಎಂದು ಆಗ್ರಹಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷರಾದ ಎಚ್.ಬಿ ಶಿವಲಿಂಗಯ್ಯ, ಅಶೋಕ್ ಕುಮಾರ್, ನಟರಾಜ್, ಸುಧಾ ಮುಂತಾದ ರೈತ ಮುಖಂಡರು ಉಪಸ್ಥಿತರಿದ್ದರು.

    ಹೇಮಾವತಿ ನಾಲಾ ಯೋಜನೆ ಆರಂಭವಾಗಿ 16 ವರ್ಷ ಕಳೆದರೂ ರೈತರಿಗೆ ಭೂ ಪರಿಹಾರ ನೀಡಿಲ್ಲ. ಅರಣ್ಯ ಮತ್ತು ಕಂದಾಯ ಇಲಾಖೆ ಜಂಟಿ ಸರ್ವೆ ನಡೆಸಿ ರೈತರಿಗೆ ಭೂಮಿ ಮಂಜೂರು ಮಾಡಬೇಕು. ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರು ಹಾಗೂ ಶಾಸಕರು ರೈತರ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿಯೂ ಮತ್ತು ಹೊರಗಡೆಯೂ ಗಂಭೀರವಾಗಿ ಸ್ಪಂದಿಸಿಲ್ಲ. ಇದರಿಂದ ತುಮಕೂರು ಜಿಲ್ಲೆಯ ಬಗ್ಗೆ ಜನಪ್ರತಿನಿಧಿಗಳಿಗೆ ಕಾಳಜಿ ಇಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ.

    — ಟಿ. ಆರ್. ಯೋಗೇಶ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು

    May 16, 2026

    ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!

    May 16, 2026

    ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ

    May 16, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ

    May 16, 2026

    ಮಧುಗಿರಿ: ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ವೀರಾಪುರ ಗ್ರಾಮದ ದಲಿತ ಛಲವಾದಿ ಸಮುದಾಯದವರು ತಮ್ಮ ಪೂರ್ವಿಕರ ಸಮಾಧಿಗಳ ಬಳಿ ಪೂಜಾ…

    ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು

    May 16, 2026

    ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!

    May 16, 2026

    ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ

    May 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.