nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026

    ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು
    • ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ
    • ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ತುಮಕೂರು: ಮೇ 15ರಂದು ಇತಿಹಾಸೋತ್ಸವ
    • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ:  ನ್ಯಾಯಕ್ಕಾಗಿ ಪೋಷಕರಿಂದಲೇ ಜಿಲ್ಲೆ, ತಾಲ್ಲೂಕು ಆಂದೋಲನ: ಮುರಳಿಧರ ಹಾಲಪ್ಪ
    • ಕೇರಳ ಲಾಟರಿ ಆಮಿಷಕ್ಕೆ ಬಿದ್ದ ಮಹಿಳೆ: 1.81 ಲಕ್ಷ ರೂ. ಕಳೆದುಕೊಂಡು ಕಂಗಾಲು
    • ತುಮಕೂರು: ಮಾಲೀಕನಿಗೇ ಮಂಕುಬೂದಿ ಎರಚಿದ ಕೆಲಸಗಾರ: ಗುತ್ತಿಗೆ ಕೊಡಿಸುವುದಾಗಿ ನಂಬಿಸಿ 4 ಲಕ್ಷ ರೂ. ವಂಚನೆ!
    • ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಎಚ್ಚರಿಕೆ:  44 ಸಾವಿರಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಂಕ್ರಾಮಿಕ ರೋಗ ನಿಯಂತ್ರಿಸಲು ಪಾಲಿಕೆಯೊಂದಿಗೆ ಕೈಜೋಡಿಸಲು ಮನವಿ
    ತುಮಕೂರು April 19, 2025

    ಸಾಂಕ್ರಾಮಿಕ ರೋಗ ನಿಯಂತ್ರಿಸಲು ಪಾಲಿಕೆಯೊಂದಿಗೆ ಕೈಜೋಡಿಸಲು ಮನವಿ

    By adminApril 19, 2025No Comments2 Mins Read
    ashwija

    ತುಮಕೂರು:  ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿ ಹರಡುತ್ತಿರುವ ಡೆಂಗ್ಯೂ, ಚಿಕನ್‌ ಗುನ್ಯಾ, ಮಲೇರಿಯಾ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವಲ್ಲಿ ಸಾರ್ವಜನಿಕರು ಪಾಲಿಕೆಯೊಂದಿಗೆ ಕೈಜೋಡಿಸಬೇಕೆಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಮನವಿ ಮಾಡಿದ್ದಾರೆ.

    ಘನತ್ಯಾಜ್ಯ ವಿಲೇವಾರಿ :


    Provided by
    Provided by

    ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಪ್ರತಿನಿತ್ಯ ಸಮರ್ಪಕವಾಗಿ ಘನತ್ಯಾಜ್ಯ ವಿಲೇವಾರಿ ಮತ್ತು ಚರಂಡಿ ಸ್ವಚ್ಚತಾ ಕಾರ್ಯ ನಡೆಯುತ್ತಿದೆ. ಎಲ್ಲಾ ವರ್ಗದ ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಘನತ್ಯಾಜ್ಯ ವಿಲೇವಾರಿ ಮತ್ತು ನಿಂತ ನೀರಿನ ತಾಣ, ತಗ್ಗು ಪ್ರದೇಶ, ಕೊಳಚೆ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಕೊಳಚೆ ಪ್ರದೇಶಗಳಲ್ಲಿ ಹೆಚ್ಚಿನ ಗಮನಹರಿಸಿ, ಕೀಟನಾಶಕ ಔಷಧಿಗಳನ್ನು ಸಿಂಪಡಿಸಿ, ಕಡ್ಡಾಯವಾಗಿ ಕಾಲಕಾಲಕ್ಕೆ ಫಾಗಿಂಗ್ ಕಾರ್ಯವನ್ನು ನಿರ್ವಹಿಸಲಾಗುತ್ತಿದೆ.

    ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕ್ರಮ :

    ಆಟೋ ಟಿಪ್ಪರ್ ವಾಹನಗಳಲ್ಲಿ ಧ್ವನಿವರ್ಧಕಗಳ ಮೂಲಕ ಡೆಂಗ್ಯೂ, ಚಿಕನ್ ಗುನ್ಯಾ, ಮಲೇರಿಯಾ ಮತ್ತು ಇತರೆ ಸಾಂಕ್ರಾಮಿಕ ರೋಗಗಳ ಬಗ್ಗೆ ಪ್ರಚಾರ ಮಾಡಿಸುವ ಮೂಲಕ ಡೆಂಗ್ಯೂ ಮತ್ತು ಚಿಕನ್ ಗುನ್ಯಾ ರೋಗಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕ್ರಮವಹಿಸಲಾಗುತ್ತಿದೆ.

    ಸಾರ್ವಜನಿಕರಲ್ಲಿ ಮನವಿ :

    ನಗರದ ಸಾರ್ವಜನಿಕರು, ವಾಣಿಜ್ಯ ಉದ್ದಿಮೆದಾರರು, ಶಾಲಾ-ಕಾಲೇಜಿನ ಆಡಳಿತ ಮಂಡಳಿಯವರು ತಮ್ಮ ಪ್ರದೇಶದ ಸುತ್ತ-ಮುತ್ತಲಿನ ಆವರಣಗಳಲ್ಲಿ ಸಿಮೆಂಟ್ ತೊಟ್ಟಿ, ಬ್ಯಾರೆಲ್, ಡ್ರಂ, ಬಕೆಟ್, ಏರ್ ಕೂಲರ್, ಕೊಡಗಳಲ್ಲಿ ನೀರನ್ನು ಶೇಖರಿಸಿದ್ದಲ್ಲಿ ವಾರಕ್ಕೊಮ್ಮೆಯಾದರೂ ಅದನ್ನು ಖಾಲಿ ಮಾಡಿ, ಒಣಗಿಸಿ ಮತ್ತೆ ಭರ್ತಿ ಮಾಡಿ ಸಂಪೂರ್ಣವಾಗಿ ಮುಚ್ಚಿಡತಕ್ಕದ್ದು. ಒಳಾಂಗಣ ಮತ್ತು ಹೊರಾಂಗಣದಲ್ಲಿ ನೀರನ್ನು ಸಂಗ್ರಹಿಸಬಹುದಾದ ಎಲ್ಲಾ ಖeಛಿeಠಿಣಚಿಛಿಟe ಗಳನ್ನು ನಿಯಮಿತವಾಗಿ ಖಾಲಿ ಮಾಡಿ ಸ್ವಚ್ಛಗೊಳಿಸಬೇಕು. ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ಒಡೆದ ಬಾಟಲಿ, ಟಿನ್, ಉಪಯೋಗಿಸಿ ಬಿಸಾಡಿದ ಟೈರ್ ಹಾಗೂ ತೆಂಗಿನಚಿಪ್ಪುಗಳಲ್ಲಿ ಮಳೆನೀರು ಶೇಖರಣೆಯಾಗದಂತೆ ಎಚ್ಚರ ವಹಿಸಿ ಅದನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಇಲ್ಲವಾದಲ್ಲಿ ನಿಂತ ನೀರಿನ ತಾಣಗಳಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ಹೆಚ್ಚುವ ಸಂಭವವಿರುವುದರಿಂದ ಸಾರ್ವಜನಿಕರು ಪಾಲಿಕೆ ವ್ಯಾಪ್ತಿಯಲ್ಲಿ ನೈರ್ಮಲ್ಯತೆ ಕಾಪಾಡಲು ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

    ಲಾರ್ವ ಸಮೀಕ್ಷೆ ಕಾರ್ಯ

    ಲಾರ್ವಾ ತಡೆಗಟ್ಟುವ ನಿಟ್ಟಿನಲ್ಲಿ ಮಹಾನಗರಪಾಲಿಕೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಡೆಂಗ್ಯೂ ಹಾಗೂ ಚಿಕನ್‌ಗುನ್ಯಾದಂತಹ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಪ್ರತಿ ಮಾಹೆಯ 1 ಮತ್ತು 3ನೇ ಶುಕ್ರವಾರಗಳಂದು ಪಾಲಿಕೆ ವ್ಯಾಪ್ತಿಯ 35 ವಾರ್ಡ್ಗಳ ಮನೆ-ಮನೆಗೆ ತೆರಳಿ ಲಾರ್ವ ಸಮೀಕ್ಷೆ ಕಾರ್ಯವನ್ನು ನಡೆಸಲಾಗುತ್ತಿದೆ. ನಗರ ವ್ಯಾಪ್ತಿಯಲ್ಲಿ ಡೆಂಗ್ಯೂ, ಚಿಕನ್‌ಗುನ್ಯಾ, ಮಲೇರಿಯಾ ಮತ್ತು ಇತರೆ ಸಾಂಕ್ರಾಮಿಕ ರೋಗಗಳಿಂದಾಗುವ ಅನಾಹುತವನ್ನು ತಡೆಯಲು ಸಹಕರಿಸಬೇಕಾಗಿ ನಾಗರಿಕರಲ್ಲಿ ಅವರು ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026

    ತುಮಕೂರು: ಮೇ 15ರಂದು ಇತಿಹಾಸೋತ್ಸವ

    May 14, 2026

    ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ:  ನ್ಯಾಯಕ್ಕಾಗಿ ಪೋಷಕರಿಂದಲೇ ಜಿಲ್ಲೆ, ತಾಲ್ಲೂಕು ಆಂದೋಲನ: ಮುರಳಿಧರ ಹಾಲಪ್ಪ

    May 14, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    ಕೊರಟಗೆರೆ: ತಾಲೂಕಿನ ಬೂದಗವಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವ ಸಂತರಾಮು ಅವರ ಅಧ್ಯಕ್ಷತೆಯಲ್ಲಿ ಮಹತ್ವದ…

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026

    ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2026

    ತುಮಕೂರು: ಮೇ 15ರಂದು ಇತಿಹಾಸೋತ್ಸವ

    May 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.