ಔರಾದ್: ತಾಲ್ಲೂಕಿನ ಮುಸ್ತಾಪುರ ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಸಂಪೂರ್ಣವಾಗಿ ಕಳಪೆ ಮಟ್ಟದಿಂದ ಕೂಡಿದೆ, ಹೀಗಾಗಿ ಅಧಿಕಾರಿಗಳು ಪರಿಶೀಲಿಸಿ ಅನುದಾನ ಬಿಡುಗಡೆ ಮಾಡಬೇಕು ಎಂದು ಕಾಂಗ್ರೆಸ್ ಯುವ ಮುಖಂಡ ಲಖನ ಲಾಧೇಕರ ಒತ್ತಾಯಿಸಿದ್ದಾರೆ.
ಬಾವಿ ತೆಗೆದಿಲ್ಲ, ಟ್ಯಾಂಕರ್ ಕೂಡ ಕಟ್ಟಿಲ್ಲ ಇದಕ್ಕೆ ಸಂಬಂಧಪಟ್ಟ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಾದ A. E. E. ಹಾಗೂ ಗುತ್ತಿಗೆದಾರರು ಕೂಡಿ ಸರಕಾರದ ಖಜಾನೆ ಖಾಲಿ ಮಾಡುವಂತಹ ಕೆಲಸ ಮಾಡುತ್ತಿದ್ದಾರೆ. ಆದ ಕಾರಣ ಕಾಮಗಾರಿಯು ಪರಿಶೀಲನೆ ಮಾಡಿದ ನಂತರ ಅನುದಾನ ಬಿಡುಗಡೆ ಮಾಡಬೇಕು ಅಲ್ಲಿಯವರೆಗೆ ತಾವುಗಳು ಅನುದಾನವನ್ನು ತಡೆಹಿಡಿಯಬೇಕು ಎಂದು ದ್ವಿತೀಯ ದರ್ಜೆ ಸಹಾಯಕ ಸಾಯಿಕಿರಣ್ ಅವರಿಗೆ ಮನವಿ ನೀಡಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಸೂಕ್ಷ್ಮವಾಗಿ ತನಿಖೆ ನಡೆಸಿ ಅವರ ಮೇಲೆ ಸೂಕ್ಷ್ಮವಾಗಿ ಕ್ರಮ ಜರುಗಿಸಬೇಕು ಇಲ್ಲವಾದಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ — ವಿಭಾಗ ಔರಾದ್ (ಬಾ ) ಕಛೇರಿ ಮುಂದುಗಡೆ ಹೋರಾಟ ಮಾಡುತ್ತೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx