ತುಮಕೂರು: ತೆಂಗಿನ ಮರ ಹತ್ತುವ ಕೆಲಸದಲ್ಲಿ ತೊಡಗಿಕೊಂಡಿರುವವರು ಕೇರಾ ಸುರಕ್ಷಾ ವಿಮಾ ಯೋಜನೆಯ ಪ್ರಯೋಜನವನ್ನು ಪಡೆಯಬೇಕೆಂದು ತಿಪಟೂರು ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ್ ಮನವಿ ಮಾಡಿದ್ದಾರೆ.
ಕೇರಾ ಸುರಕ್ಷಾ ವಿಮಾ ಯೋಜನೆಯು ವೈಯಕ್ತಿಕ ಅಪಘಾತ ವಿಮಾ ಯೋಜನೆಯಾಗಿದ್ದು, ವಾರ್ಷಿಕ ವಿಮಾ ಕಂತಿನ ಹಣ 956 ರೂ. ಹಾಗೂ ರೈತರ ವಂತಿಕೆ ಹಣ 239 ರೂ.ಗಳಿಗೆ ನಿಗದಿಪಡಿಸಲಾಗಿದೆ. ಇದರಲ್ಲಿ 7ಲಕ್ಷ ರೂ.ವರೆಗಿನ ವಿಮೆ ಮತ್ತು 2 ಲಕ್ಷ ರೂ.ಗಳವರೆಗೆ ಆಸ್ಪತ್ರೆ ಚಿಕಿತ್ಸೆ ವೆಚ್ಚ ಒಳಗೊಂಡಿರುತ್ತದೆ.
ಕೇರಾ ಸುರಕ್ಷಾ ವಿಮಾ ಯೋಜನೆಗೆ 18 ರಿಂದ 65 ವರ್ಷದೊಳಗಿನ ತೆಂಗಿನ ಮರ ಹತ್ತುವವರು/ತೆಂಗಿನಕಾಯಿ ಕೀಳುವವರು/ನೀರಾ ತಂತ್ರಜ್ಞರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ ಅಥವಾ ತಿಪಟೂರು ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx