ತುಮಕೂರು: ಹಿರೇಹಳ್ಳಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ./ಪಿಯುಸಿ ಉತ್ತೀರ್ಣ/ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಒಂದು ವರ್ಷದ ಟೂಲ್ ರೂಮ್ ಮೆಷಿನಿಸ್ಟ್ ಕೋರ್ಸಿನ ಪ್ರವೇಶಾತಿ ಪ್ರಾರಂಭವಾಗಿದ್ದು, ಬಾಕಿ ಉಳಿದಿರುವ ಸೀಟುಗಳಿಗೆ ಆಗಸ್ಟ್ 3ರವರೆಗೆ ಅರ್ಜಿ ಸಲ್ಲಿಸಿ ಪ್ರವೇಶಾತಿ ಪಡೆಯಬಹುದಾಗಿದೆ.
ಡಿಪ್ಲೋಮಾ/ಐಟಿಐ/ಬಿಇ ಓದುತ್ತಿರುವ ವಿದ್ಯಾರ್ಥಿಗಳಿಗೆ ಅವರ ಕೌಶಲ್ಯ ಜ್ಞಾನಾರ್ಜನೆಗಾಗಿ 1 ರಿಂದ 6 ತಿಂಗಳವರೆಗೆ ಅಲ್ಪಾವಧಿ ಕೋರ್ಸ್ಗಳು ಲಭ್ಯವಿದ್ದು, ಅಕಾಡೆಮಿಕ್ ಇಂಟರ್ನ್ಶಿಪ್ ಕೂಡ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಟಿಟಿಸಿ ಕಾಲೇಜು, ಮೊ. ಸಂ. 9844527236 ನ್ನು ಸಂಪರ್ಕಿಸಬೇಕೆಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
