ತುಮಕೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕು ರುಡ್ ಸೆಟ್ ಸಂಸ್ಥೆಯಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಮನೋವಿಜ್ಞಾನ, ಪತ್ರಿಕೋದ್ಯಮ, ಗ್ರಾಮೀಣಾಭಿವೃದ್ಧಿ, ಸಮಾಜಶಾಸ್ತ್ರ, ಸಮಾಜ ಕಾರ್ಯ ವಿಷಯದಲ್ಲಿ ಸ್ನಾತಕೋತ್ತರ ಪದವಿ/ ಎಂ.ಕಾಂ/ಬಿಎಸ್ಸಿ(ಕೃಷಿ), ಬಿಬಿಎಂ/ಬಿ.ಎ./ಬಿಎಸ್ಸಿ ಪದವಿಯೊಂದಿಗೆ ಬಿ.ಎಡ್ ಅಥವಾ ಎಂ.ಎಡ್ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವವರು ಕನ್ನಡ ಹಾಗೂ ಇಂಗ್ಲೀಷ್ ಭಾಷೆಯನ್ನು ಬಲ್ಲವರಾಗಿದ್ದು, ಟೈಪಿಂಗ್ ಹಾಗೂ ಗಣಕಯಂತ್ರದಲ್ಲಿ ಎಂ.ಎಸ್ ವರ್ಡ್, ಎಂ.ಎಸ್ ಎಕ್ಸೆಲ್, ಎಂ.ಎಸ್. ಪವರ್ ಪಾಯಿಂಟ್ ನಲ್ಲಿ ಪರಿಣಿತಿ ಹೊಂದಿದ್ದು, 22 ರಿಂದ 30 ವಯೋಮಾನದೊಳಗಿನವರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವಯಂ ವಿವರವನ್ನು ಇ-ಮೇಲ್: rudsetinlm@gmail.comಗೆ ಡಿಸೆಂಬರ್ 28ರೊಳಗೆ ಸಲ್ಲಿಸಬೇಕು. ಆಯ್ಕೆಯಾದವರಿಗೆ ಮಾಸಿಕ 30,000 ರೂ. ಗಳ ವೇತನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ : 9113880324 ಅಥವಾ 9686172444ನ್ನು ಸಂಪರ್ಕಿಸ ಬೇಕೆಂದು ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ರವಿಕುಮಾರ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx