ಮಧುಗಿರಿ: ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ 2026ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ 90 ಕ್ಕಿಂತ ಹೆಚ್ಚು ಅಂಕಗಳಿಸಿರುವ ಸರ್ಕಾರಿ ನೌಕರರ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ರಂಗಪ್ಪ ಹಾಗೂ ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನಾಂಕವಾಗಿದ್ದು, http://powermedia.info ಲಿಂಕ್ ಮುಖಾಂತರ ಮಾತ್ರ ಅರ್ಜಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


