ತುಮಕೂರು:ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ವೀರಶೈವ ಲಿಂಗಾಯತ ಜಾತಿ ಮತ್ತು ಉಪಜಾತಿಗೆ ಸೇರಿದ ಸಮುದಾಯದವರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಫಲಪೇಕ್ಷಿಗಳು ಬಸವ ಬೆಳಕು( ಹೊಸತು / ನವೀಕರಣ), ವಿದೇಶ ವಿದ್ಯಾ ವಿಕಾಸ(ಹೊಸತು), ಜೀವ ಜಲ, ಕಾಯಕ ಕಿರಣ, ಸ್ವಾವಲಂಬಿ ಸಾರಥಿ, ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿದಾರರು 2024–25 ಮತ್ತು 2025–26ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಮತ್ತೊಮ್ಮೆ ಮರು ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಆಸಕ್ತರು https://www.sevasindhu.karnataka.gov.in ಪೋರ್ಟಲ್ ಮೂಲಕ ಗ್ರಾಮ ಒನ್ / ಕರ್ನಾಟಕ ಒನ್ / ತುಮಕೂರು ಒನ್ ಸೇವಾ ಕೇಂದ್ರದಲ್ಲಿ ಸೆಪ್ಟೆಂಬರ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಯಡಿ ಸೌಲಭ್ಯಕ್ಕಾಗಿ https://www.koushalkar.com.in ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ https://kvldcl.karnataka.gov.in ಅಥವಾ ಸಹಾಯವಾಣಿ ಸಂಖ್ಯೆ 080–22865522, 9900012351 ಅಥವಾ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 0816–2005008ನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
