ತುಮಕೂರು: ವಿವಿಧ ಟ್ರೇಡ್ ನಲ್ಲಿ ಐ.ಟಿ.ಐ. ತರಬೇತಿ ಪಡೆದ ಅಭ್ಯರ್ಥಿಗಳಿಗಾಗಿ ಬೆಂಗಳೂರಿನ ಹೆಚ್.ಎ.ಎಲ್. ಸಂಸ್ಥೆಯು ಅಪ್ರೆಂಟಿಸ್ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
Fitter, Turner, Machinist, Electrician, Welder, COPA, Carpenter, Foundryman, Sheet Metal Worker, Tool and Die maker, CNC Programmer cum Operator, Mechanic Refrigeration and Air Conditioning ಟ್ರೇಡ್ನಲ್ಲಿ ಐ.ಟಿ.ಐ ಪಾಸಾದ ಅಭ್ಯರ್ಥಿಗಳು ಜೂನ್ 3ರೊಳಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಭಾವಚಿತ್ರ, ಎಸ್.ಎಸ್.ಎಲ್.ಸಿ. ಮತ್ತು ಐ.ಟಿ.ಐ. ಅಂಕ ಪಟ್ಟಿ ಹಾಗೂ ಆಧಾರ್ ಕಾರ್ಡ್ ಪ್ರತಿ, ಮೀಸಲಾತಿ ಪ್ರಮಾಣ ಪತ್ರ(SC/ST/OBC/PH) ಹಾಗೂ ಮತ್ತಿತರ ದಾಖಲೆಗಳನ್ನು ಲಗತ್ತಿಸಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಮುನ್ನ www.apprenticeship.gov.inನಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ತುಮಕೂರು ಅಥವಾ ದೂರವಾಣಿ ಸಂ: 0816-2278488ನ್ನು ಸಂಪರ್ಕಿಸಬೇಕೆಂದು ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW