ತುಮಕೂರು: ಮೈಸೂರಿನ ಜೆಎಸ್ ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ವತಿಯಿಂದ 3 ವರ್ಷಗಳ ಅವಧಿಯ ವಿವಿಧ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಹ ವಿಕಲಚೇತನ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆರ್ಕಿಟೆಕ್ಚರ್ ಅಸಿಸ್ಟೆಂಟ್ ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಷನ್ಸ್(ಫಾರ್ ವಿಜ್ಯುವಲಿ ಇಂಪರ್ಡ್), ಅಪೆರಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ, ಎಲೆಕ್ಟ್ರಿಕಲ್ ಇಂಜಿನಿಯರಿಂಗ್ & ಎಲೆಕ್ಟ್ರಿಕ್ ವೆಹಿಕಲ್ ಟೆಕ್ನಾಲಜಿ ಕೋರ್ಸುಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿಶೇಷ ಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ವಿದ್ಯಾರ್ಥಿ ವೇತನದ ಆರ್ಥಿಕ ಸಹಾಯ ದೊರೆಯುತ್ತದೆ. ಪಾಲಿಟೆಕ್ನಿಕ್ ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುವುದು. ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಿದ್ಯಾರ್ಥಿ ನಿಲಯದ ಸೌಲಭ್ಯ ಕಲ್ಪಿಸಲಾಗುವುದು.
ಅರ್ಹ ವಿದ್ಯಾರ್ಥಿಗಳು (ಸಾಮಾನ್ಯ ವರ್ಗದ ಅಭ್ಯರ್ಥಿಗಳು 100 ರೂ. ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ/ಪ್ರವರ್ಗ–1ಕ್ಕೆ ಸೇರಿದವರಿಗೆ 50 ರೂ.ಗಳ) ಮೈಸೂರಿನಲ್ಲಿ ಸಂದಾಯವಾಗುವಂತೆ ಪ್ರಾಂಶುಪಾಲರು, ಜೆಎಸ್ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್, ಮೈಸೂರು-570006 ಇವರಿಗೆ ನಗದು ಅಥವಾ ಡಿಡಿಯನ್ನು ಕಳುಹಿಸಿ ಪ್ರವೇಶ ಅರ್ಜಿಗಳನ್ನು ಪಡೆಯಬಹುದು ಅಥವಾ ವೆಬ್ ಸೈಟ್ ಮೂಲಕ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
ಅಂಧತ್ವ (6/60 ಅಥವಾ 20/200 ಸ್ನೆಲೆನ್) ಹೊಂದಿರುವ ವಿಶೇಷ ಚೇತನರು, ಮೂಳೆ ಮತ್ತು ಕೀಲು ಅಂಗವಿಕಲತೆ(ಶೇ.40 ಮತ್ತು ಮೇಲ್ಪಟ್ಟ) ಹಾಗೂ ಕಿವುಡು ಮತ್ತು ಮೂಕ ಅಂಗವಿಕಲತೆ(60 ಡಿಬಿ ಮತ್ತು ಮೇಲ್ಪಟ್ಟ) ಹೊಂದಿದ್ದವರು ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ವೆಬ್ ಸೈಟ್: www.jsspda.org ಇ–ಮೇಲ್ ಅಥವಾ ದೂ.ವಾ.ಸಂ. 9844644937ನ್ನು ಸಂಪರ್ಕಿಸಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಜೂನ್ 16ರೊಳಗೆ ಮೇಲ್ಕಂಡ ವಿಳಾಸಕ್ಕೆ ತಲುಪಿಸಬೇಕೆಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————