ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಶಿವಮೊಗ್ಗ ತರಬೇತಿ ಸಂಸ್ಥೆಯಲ್ಲಿ ದಿನಾಂಕ 1/7/2024 ರಿಂದ 6 ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಆಫ್ ಕೋ–ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿ ಆಯೋಜಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಆಭ್ಯರ್ಥಿಗಳಿಂದ ಮತ್ತು ಸಹಕಾರ ಸಂಘ ಹಾಗೂ ಬ್ಯಾಂಕ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಅರ್ಜಿ ಸಲ್ಲಿಕೆ ಮಾಡಬಹುದು. ತರಬೇತಿ ಪಡೆಯಲು ಕನಿಷ್ಠ ಎಸ್ಎಸ್ಎಲ್‌ಸಿ ವಿದ್ಯಾರ್ಹತೆ ಹೊಂದಿರಬೇಕು. ಖಾಸಗಿ ಅಭ್ಯರ್ಥಿಗಳಿಗೂ ಪ್ರವೇಶಕ್ಕೆ ಅವಕಾಶವಿರುತ್ತದೆ.
ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಮಾಸಿಕ ರೂ. 500 ಶಿಷ್ಯವೇತನ ನೀಡಲಾಗುತ್ತದೆ ಹಾಗೂ ವಿಶೇಷ ತರಬೇತಿ ಅನ್ವಯ 30 ವರ್ಷದೊಳಗಿನ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾಸಿಕ ರೂ. 600 ಶಿಷ್ಯವೇತನ ನೀಡಲಾಗುತ್ತದೆ.
ಅಭ್ಯರ್ಥಿಗಳು ಅರ್ಜಿಗಳನ್ನು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಶಿವಮೊಗ್ಗ, ವಿನೋಬನಗರ 2ನೇ ಹಂತ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಜೂನ್ 15ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕರೆ ಮಾಡಿ 08182-248873 ಮತ್ತು 7022429440.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA