ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ವೃತ್ತಿಪರ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜಾಲತಾಣ https://shp.karnataka.gov.in/bcwd ನಲ್ಲಿ ಅಕ್ಟೋಬರ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ ಆದಾಯ ಮಿತಿ 1ಲಕ್ಷ ರೂ. ಹಾಗೂ ಪ್ರವರ್ಗ-1, ಪರಿಶಿಷ್ಟ ಜಾತಿ/ಪಂಗಡಕ್ಕೆ ಸೇರಿದ ಅಭ್ಯರ್ಥಿಗಳ ಆದಾಯ ಮಿತಿ 2.50ಲಕ್ಷ ರೂ. ಮಿತಿಯೊಳಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಇಲಾಖೆ ವೆಬ್ಸೈಟ್ https://bcwd.karnataka.gov.in ಅಥವಾ ದೂರವಾಣಿ ಸಂಖ್ಯೆ 8050770004, 8050770005ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸೋನಿಯಾ ವರ್ಣೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q