ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಏಕಲವ್ಯ ಪ್ರಶಸ್ತಿ ನೀಡಲು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆ ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತುಮಕೂರು ಇವರಿಂದ ಅರ್ಜಿಯನ್ನು ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 18ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮಂಜುನಾಥ್(ಮೊ.ಸಂ.9741691379) ಅವರನ್ನು ಸಂಪರ್ಕಿಸಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q