ತುಮಕೂರು: ರುಡ್ ಸೆಟ್ ಸಂಸ್ಥೆಯ ವತಿಯಿಂದ ಮೇ 19 ರಿಂದ 30 ದಿನಗಳ ಉಚಿತ ವಿದ್ಯುತ್ ಮೋಟಾರ್ ರೀವೈಂಡಿಂಗ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ರಾಜ್ಯದ ಗ್ರಾಮೀಣ ನಿರುದ್ಯೋಗಿ ಯುವಕರು ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ 9380162042, 9380220884, 9113880324ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ ಸೆಟ್ ಸಂಸ್ಥೆ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————