ತುಮಕೂರು: ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್.ಡಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ–1, 2ಎ, 3ಎ ಹಾಗೂ 3ಬಿ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನ ಸೌಲಭ್ಯ ನೀಡಲು ಅರ್ಹರಿಂದ ಆನ್’ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ಫೆಬ್ರವರಿ 5ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ ಇಲಾಖಾ https://bcwd.karnataka.gov.in ಅಥವಾ ಸಹಾಯವಾಣಿ ಸಂಖ್ಯೆ: 8050770004ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸೋನಿಯಾ ವರ್ಣೇಕರ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4