ಶಿವಮೊಗ್ಗ : ಆಗಸ್ಟ್ 2024 ನೇ ಸಾಲಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಸಾಗರ ಮತ್ತು ಕಾರ್ಗಲ್ ನಲ್ಲಿ ಖಾಲಿ ಇರುವ ವೃತ್ತಿಗಳಿಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಆಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಾಗರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದವರಿಗೆ ಎಲೆಕ್ಟ್ರೀಷಿಯನ್ , ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್, ಮೆಕ್ಯಾನಿಕ್ ಮೋಟರ್ ವೆಹಿಕಲ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್, ಐ.ಸಿ.ಟಿ.ಎಸ್.ಎಂ, ಅಡ್ವಾನ್ಸ್ ಸಿ.ಎನ್.ಸಿ ಮೆಷಿನಿಂಗ್, ಮೆಕ್ಯಾನಿಕ್ ಡೀಸೆಲ್, ಇಂಡಸ್ಟ್ರಿಯಲ್ ರೋಬೋಟಿಕ್ಸ್ ಮತ್ತು ಡಿಜಿಡಲ್ ಮ್ಯಾನುಫಾಕ್ಟರಿಂಗ್ ಹಾಗೂ 8ನೇ ತರಗತಿ ಪಾಸ್ / ಎಸ್.ಎಸ್.ಎಲ್,ಸಿ ಪಾಸ್/ಫೇಲ್ ಆದವರಿಗೆ ಡ್ರಸ್ ಮೇಕಿಂಗ್, ವೆಲ್ಡರ್ ಹುದ್ದೆಗಳಿಗೆ ಮತ್ತು ಕಾರ್ಗಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಸ್.ಎಸ್.ಎಲ್,ಸಿ ಉತ್ತೀರ್ಣರಾದವರಿಗೆ ಎಲೆಕ್ಟ್ರೀಷಿಯನ್, ಫಿಟ್ಟರ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್ ವೃತ್ತಿಗಳಿಗೆ ತರಬೇತಿ ನೀಡಲಾಗುವುದು.
ಆಸಕ್ತ ಆಭ್ಯರ್ಥಿಗಳು www.city.karnataka.gov.in ಆನ್ ಲೈನ್ ನಲ್ಲಿ ಅಥಾವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಸಾಗರ / ಕಾರ್ಗಲ್ ಭೇಟಿ ನೀಡಿ ಆನ್ ಲೈನ್ ನಲ್ಲಿ ಜೂ.03 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ 7975263812/ 9480329491/ 9448622870/ 9480603468 ಗಳನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


