ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಕುರುಬ ಸಮಜದ ವಿದ್ಯಾರ್ಥಿಗಳಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ನಗರದ ಕನಕಶ್ರೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಸಲ್ಪಡುತ್ತಿರುವ ‘ಕನಕಶ್ರೀ ವಿದ್ಯಾರ್ಥಿ ನಿಲಯ’ದ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯಾರು ಅರ್ಜಿ ಸಲ್ಲಿಸಬಹುದು?:
- ಬೆಂಗಳೂರಿನಲ್ಲಿ ಈ ಕೆಳಗಿನ ಕೋರ್ಸ್‌ಗಳನ್ನು ವ್ಯಾಸಂಗ ಮಾಡುತ್ತಿರುವ ಕುರುಬ ಸಮಾಜದ ವಿದ್ಯಾರ್ಥಿಗಳು ಅರ್ಹರು:
- ಸ್ನಾತಕೋತ್ತರ ಪದವಿ (PG) ವಿದ್ಯಾರ್ಥಿಗಳು.
- ವೃತ್ತಿಪರ ಶಿಕ್ಷಣ: ಇಂಜಿನಿಯರಿಂಗ್, ವೈದ್ಯಕೀಯ, ಕಾನೂನು ಇತ್ಯಾದಿ.
- ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪಡೆಯುತ್ತಿರುವವರು.
ವಿದ್ಯಾರ್ಥಿನಿಲಯದ ಸೌಲಭ್ಯಗಳು: ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಈ ನಿಲಯದಲ್ಲಿ ಉತ್ತಮ ಸೌಲಭ್ಯಗಳನ್ನು ಕಲ್ಪಿಸಲಾಗಿದೆ:
- ಉಚಿತ ವಸತಿ: ವಿದ್ಯಾರ್ಥಿಗಳಿಗೆ ಉಚಿತವಾಗಿ ಉಳಿದುಕೊಳ್ಳುವ ವ್ಯವಸ್ಥೆ.
- ಅಧ್ಯಯನಕ್ಕೆ ಪೂರಕ ವಾತಾವರಣ: ಪ್ರತ್ಯೇಕವಾದ ಸ್ಟಡಿ ಕಂಪಾರ್ಟ್‌ಮೆಂಟ್‌ಗಳ ವ್ಯವಸ್ಥೆ.
- ರಿಯಾಯಿತಿ ದರದ ಊಟ: ಅತ್ಯಂತ ಕಡಿಮೆ ದರದಲ್ಲಿ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ.
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳನ್ನು ಬೆಂಗಳೂರಿನಲ್ಲಿ ನಡೆಯುವ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ವಿಶೇಷವಾಗಿ ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಮತ್ತು ಗಡಿನಾಡಿನ ವಿದ್ಯಾರ್ಥಿಗಳಿಗೆ ಆಯ್ಕೆಯಲ್ಲಿ ಮೊದಲ ಆದ್ಯತೆ ನೀಡಲಾಗುವುದು ಎಂದು ಟ್ರಸ್ಟ್ ತಿಳಿಸಿದೆ.
ಅರ್ಜಿ ಸಲ್ಲಿಸುವುದು ಹೇಗೆ?:
ಆಸಕ್ತ ವಿದ್ಯಾರ್ಥಿಗಳು ತಮ್ಮ ಭರ್ತಿ ಮಾಡಿದ ಅರ್ಜಿಗಳನ್ನು ಫೆಬ್ರವರಿ 10ರ ಒಳಗೆ ಕೆಳಗಿನ ವಿಳಾಸಕ್ಕೆ ತಲುಪಿಸಬೇಕಾಗಿ ವಿನಂತಿಸಲಾಗಿದೆ.
ವಿಳಾಸ: ಶ್ರೀ ಟಿ.ಬಿ. ಬಳಗಾವಿ, ಅಧ್ಯಕ್ಷರು, ಕನಕಶ್ರೀ ಚಾರಿಟಬಲ್ ಟ್ರಸ್ಟ್, ನಂ. 2177/ಎ, “ಕನಕ ಸಂಕೀರ್ಣ”, ದೊಡ್ಡಬಸ್ತಿ ರಸ್ತೆ, ಸೊಣ್ಣೇನಹಳ್ಳಿ ಸರ್ಕಲ್, 3ನೇ ಬ್ಲಾಕ್, ವಿಶ್ವೇಶ್ವರಯ್ಯ ಬಡಾವಣೆ, ಬೆಂಗಳೂರು — 560010.
ಹೆಚ್ಚಿನ ಮಾಹಿತಿಗಾಗಿ ಎಂ. ಪ್ರಕಾಶ್ (ಖಜಾಂಚಿ): 9845101696 ಅಥವಾ ಎಂ. ಮಹದೇವ್ (ವಾರ್ಡನ್): 9448514217 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


