ಕೇಂದ್ರ ಸರ್ಕಾರದಿಂದ ಕ್ರೀಡೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2025ನೇ ಸಾಲಿನ ಪದ್ಮಶ್ರೇಣಿ ಪ್ರಶಸ್ತಿಗಳಾದ ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಹಿಂದಿನ ದಿನದಂದು ಪ್ರಕಟಿಸಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಕೇಂದ್ರ ಗೃಹ ಮಂತ್ರಾಲಯ ಭಾರತ ಸರ್ಕಾರದ ಅಧಿಸೂಚನೆಯಂತೆ ಸಮಾಜದ ಯಾವುದೇ ಕ್ಷೇತ್ರಗಳಲ್ಲಿ ಅಂದರೆ ಕಲೆ, ಸಾಹಿತ್ಯ ಮತ್ತು ಶಿಕ್ಷಣ ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ ಮತ್ತು ಇಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳನ್ನು, ನಾಗರೀಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಇತ್ಯಾದಿಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2024-25ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಿಗೆ ಪ್ರಸ್ತಾವನೆ / ಮನವಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.
ಪದ್ಮ ಶ್ರೇಣಿಯ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮ ಭೂಷಣ, ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವ ದಿನದ ಹಿಂದಿನ ದಿನದಂದು ಕೇಂದ್ರ ಸರ್ಕಾರದಿಂದ ಪ್ರಕಟಿಸಲಾಗುತ್ತದೆ. 2025ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಿಗೆ ಅನ್ವಯಿಸುವ ನಿಯಮಾವಳಿಗಳು https://padmaawards.gov.in ರಲ್ಲಿ ಲಭ್ಯವಿರುತ್ತದೆ.
ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಸಂಬಂಧಿಸಿದ ಶಿಫಾರಸ್ಸಿನ ಪ್ರಸ್ತಾವನೆಗಳನ್ನು ಸಲ್ಲಿಸುವ ಪ್ರಕ್ರಿಯೆಯು 2024ರ ಆಗಸ್ಟ್ 23ರೊಳಗಾಗಿ ಸಲ್ಲಿಸಬಹುದಾಗಿದೆ. ಹಾಗೂ ಸಾಫ್ಟ್ ಪ್ರತಿಗಳನ್ನು ಇ-ಮೇಲ್ ವಿಳಾಸ uspolitical-dpar@karnataka.gov.in ಗೆ 2024ರ ಆಗಸ್ಟ್ 23ರೊಳಗಾಗಿ ಸಲ್ಲಿಸಬೇಕು. ನಂತರ ಬರುವ ಯಾವುದೇ ಪ್ರಸ್ತಾವನೆಗಳನ್ನು ಅಥವಾ ಮನವಿಗಳನ್ನು ಪರಿಗಣಿಸಲು ಸಾಧ್ಯವಿರುವುದಿಲ್ಲ.
ಇ-ಮೇಲ್ uspolitical-dpar@karnataka.gov.in ಗೆ ಕಳುಹಿಸಿ, ಒಂದು ಪ್ರತಿಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ, ಶಿವಮೊಗ್ಗ ಕಚೇರಿಗೆ ನೀಡುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ದೂ.ಸಂ.:08182-223328 ನ್ನು ಸಂಪರ್ಕಿಸುವುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA