ತುಮಕೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿ ನಿಲಯದಲ್ಲಿ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವರ್ಗದವರಿಗೆ ಶೇ.75ರಷ್ಟು ಹಾಗೂ ಪರಿಶಿಷ್ಟ ಜಾತಿ/ ಪ.ಪಂಗಡ/ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಸ್ಥಾನಗಳನ್ನು ಮೀಸಲಿರಿಸಿದ್ದು, ಆಸಕ್ತರು ಸೆಪ್ಟೆಂಬರ್ 12ರೊಳಗಾಗಿ ಜಾಲತಾಣ: https://shp.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಅಜಾದ್ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು-572102 ಅಥವಾ ದೂರವಾಣಿ ಸಂಖ್ಯೆ 0816-2273724ನ್ನು ಸಂಪರ್ಕಿಸಬೇಕೆಂದು ಅಲ್ಪಸಂಖ್ಯಾತರ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


