ತುಮಕೂರು: ”ವಿಶ್ವ ವಿಕಲಚೇತನರ ದಿನಾಚರಣೆ” ಅಂಗವಾಗಿ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯು ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳ ಶಿಕ್ಷಕರಿಗೆ “ರಾಜ್ಯ ಪ್ರಶಸ್ತಿ” ನೀಡಲು ಅರ್ಜಿ ಆಹ್ವಾನಿಸಿದೆ.
ಆಸಕ್ತರು ಅರ್ಜಿ ನಮೂನೆಯನ್ನು ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ದ್ವಿಪ್ರತಿಯಲ್ಲಿ ನವೆಂಬರ್ 11ರೊಳಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು ಇವರಿಗೆ ಸಲ್ಲಿಸುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ. ದೊಡ್ಡಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q