ತುಮಕೂರು: ಜಿಲ್ಲೆಯ ಕಂದಾಯ ಇಲಾಖೆಯ ಭೂಸ್ವಾಧೀನ ಹಾಗೂ ಇತರೆ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನು ಸಲಹೆ ನೀಡಲು ಕಾನೂನು ಸಲಹೆಗಾರ(ಕಾನೂನು ಕೋಶ)ರ ಹುದ್ದೆಯನ್ನು ಭರ್ತಿ ಮಾಡಲು ನಿವೃತ್ತ ಜಿಲ್ಲಾ ನ್ಯಾಯಾಧೀಶರು ಅಥವಾ ನಿವೃತ್ತ ಸಿವಿಲ್ ನ್ಯಾಯಾಧೀಶರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ತಮ್ಮ ವೈಯಕ್ತಿಕ ಮಾಹಿತಿಯ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜುಲೈ 8ರೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ.
ಆಯ್ಕೆಯಾದವರಿಗೆ ಸರ್ಕಾರದ ಆದೇಶದನ್ವಯ ಮಾಸಿಕ ಸಂಚಿತ ವೇತನವನ್ನು ಪಾವತಿಸಲಾಗುವುದು. ಆಯ್ಕೆಯ ವಿಚಾರದಲ್ಲಿ ಜಿಲ್ಲಾಧಿಕಾರಿಗಳ ತೀರ್ಮಾನವೇ ಅಂತಿಮವಾಗಿದ್ದು, ಯಾವುದೇ ವ್ಯಾಜ್ಯ ತಕರಾರುಗಳಿಗೆ ಅವಕಾಶವಿರುವುದಿಲ್ಲವೆಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA