ತುಮಕೂರು: ತುಮಕೂರು ಜಿಲ್ಲಾ ಸರ್ಕಾರಿ ವಕೀಲರು ಸೇರಿದಂತೆ ಜಿಲ್ಲೆಯ ಕುಣಿಗಲ್, ಶಿರಾ, ಮಧುಗಿರಿ, ತಿಪಟೂರು, ತುರುವೇಕೆರೆ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವವರು ಕುಣಿಗಲ್, ಶಿರಾ, ಮಧುಗಿರಿ, ತಿಪಟೂರು, ತುರುವೇಕೆರೆ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗಳಿಗೆ 7 ವರ್ಷ ಹಾಗೂ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿರಬೇಕು.
ಅರ್ಹ ವಕೀಲರು ತಮ್ಮ ಲಿಖಿತ ಅರ್ಜಿಯೊಂದಿಗೆ ವಕೀಲ ವೃತ್ತಿ ಪೂರೈಸಿರುವ ಬಗ್ಗೆ ದೃಢೀಕರಣ ಪತ್ರ, ವಕೀಲ ವೃತ್ತಿ ನೋಂದಣಿ ದೃಢೀಕರಣ ಪತ್ರ, ವಿದ್ಯಾರ್ಹತೆಗೆ ಸಂಬAಧಿಸಿದ ಪ್ರಮಾಣ ಪತ್ರಗಳ ದೃಢೀಕೃತ ಪ್ರತಿ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಲಗತ್ತಿಸಿ ನವೆಂಬರ್ 19ರೊಳಗಾಗಿ ಜಿಲ್ಲಾಧಿಕಾರಿಗಳು, ತುಮಕೂರು ಜಿಲ್ಲೆ ಇವರಿಗೆ ಸಲ್ಲಿಸಬೇಕು. ಅವಧಿ ಮೀರಿದ ಹಾಗೂ ಅಗತ್ಯ ದಾಖಲೆಗಳನ್ನು ಲಗತ್ತಿಸಿಲ್ಲದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q