ತುಮಕೂರು: ಪ್ರವಾಸೋದ್ಯಮ ಇಲಾಖೆಯು ಎಸ್.ಸಿ.ಎಸ್.ಪಿ./ಟಿ.ಎಸ್.ಪಿ. ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ವಿವಿಧ ವಸತಿ ಸಹಿತ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ತರಬೇತಿಯನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಮೈಸೂರಿನ ಫುಡ್ ಕ್ರಾಫ್ಟ್ ಇನ್ಸ್ ಟಿಟ್ಯೂಟ್ ಹಾಗೂ ಬೆಂಗಳೂರಿನ ಇನ್ಸ್ ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ ಮೆಂಟ್ ಮೂಲಕ ನೀಡಲಾಗುವುದು. ಆಹಾರ ಮತ್ತು ಪಾನೀಯ ಸೇವಾ ಮೇಲ್ವಿಚಾರಕ, ಕೊಠಡಿ ಸಹಾಯಕ ಹಾಗೂ ಬಹು ಅಡುಗೆ ತಯಾರಕರ ಸಂಬಂಧ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು 20 ರಿಂದ 45 ವರ್ಷದೊಳಗಿನವರಾಗಿರಬೇಕು. ಆಹಾರ ಮತ್ತು ಪಾನೀಯ ಸೇವಾ ಮೇಲ್ವಿಚಾರಕ ಹುದ್ದೆಗೆ ಕನಿಷ್ಠ 10ನೇ ತರಗತಿ, ಕೊಠಡಿ ಸಹಾಯಕ ಹುದ್ದೆಗೆ 5ನೇ ತರಗತಿ ಹಾಗೂ ಬಹು ಅಡುಗೆ ತಯಾರಕ ಹುದ್ದೆಗೆ ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿರಬೇಕು.
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ನಗರದ ಅಶೋಕ ರಸ್ತೆ, ರೆಡ್ ಕ್ರಾಸ್ ಭವನ, 1ನೇ ಮಹಡಿ, ಕೊಠಡಿ ಸಂಖ್ಯೆ ಎಫ್ 232ರಲ್ಲಿರುವ ಪ್ರವಾಸೋದ್ಯಮ ಇಲಾಖೆಗೆ ಖುದ್ದಾಗಿ ಭೇಟಿ ನೀಡಿ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಸ್ವಯಂ ದೃಢೀಕರಿಸಿ ಅಗತ್ಯ ದಾಖಲೆಗಳೊಂದಿಗೆ ದ್ವಿಪ್ರತಿಯಲ್ಲಿ ಜೂನ್ 30ರೊಳಗಾಗಿ ಮುಚ್ಚಿದ ಲಕೋಟೆಯಲ್ಲಿ ಮೇಲ್ಕಂಡ ಕಚೇರಿಗೆ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಈಗಾಗಲೇ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್ ಗಳಲ್ಲಿ ನೌಕರಿ ಖಾತರಿಯಾಗಿರುತ್ತದೆ. ತರಬೇತಿ ಪಡೆಯುವ ಅವಧಿಯಲ್ಲಿ ಮಾಹೆಯಾನ 2,000 ರೂ.ಗಳ ಸ್ಟೈಫೆಂಡ್ ನೀಡಲಾಗುವುದು. ತರಬೇತಿಗೆ ಹಾಜರಾಗುವವರಿಗೆ ಉಚಿತ ವಸತಿ, ಊಟೋಪಚಾರ ಹಾಗೂ ಸಮವಸ್ತ್ರವನ್ನು ನೀಡಲಾಗುವುದು.
ತರಬೇತಿ ಜೊತೆಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್ ಗಳಲ್ಲಿ ಆನ್ ಜಾಬ್ ಟ್ರೈನಿಂಗ್ ಸಹ ನೀಡಲಾಗುವುದು. ತರಬೇತಿ ಪಡೆದವರಿಗೆ ಬೆಂಗಳೂರಿನ ಐಹೆಚ್ ಎಂ ಹಾಗೂ ಮೈಸೂರಿನ ಎಫ್ ಸಿಐ ಸಂಸ್ಥೆಗಳಿಂದ ಪ್ರಮಾಣ ಪತ್ರ ನೀಡುವುದರಿಂದ ರಾಜ್ಯವಲ್ಲದೆ ದೇಶದ ಯಾವುದೇ ಭಾಗದ ಹೋಟೆಲ್ ಉದ್ಯಮದಲ್ಲಿ ಕೆಲಸ ಖಾತರಿಯಾಗಲಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ. ಸಂ.0816-2006349ನ್ನು ಸಂಪರ್ಕಿಸಬೇಕೆಂದು ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC




