ತುಮಕೂರು: ಜಿಲ್ಲಾ ವಿಕಲಚೇತನರ ಕಲ್ಯಾಣ ಇಲಾಖೆಯು ಜಿಲ್ಲೆಯಲ್ಲಿ ಬಿ.ಕಾಂ, ಬಿ.ಎಸ್ಸಿ, ಬಿ.ಎಸ್ಸಿ ಅಗ್ರಿಕಲ್ಚರ್, ಎಂ.ಕಾಂ. ಎಂ.ಎಸ್ಸಿ, ಎಂ.ಎಸ್ಸಿ ಅಗ್ರಿಕಲ್ಚರ್, ಬಿ.ಇ. ಬಿ.ಸಿ.ಎ, ಎಂ.ಸಿ.ಎ ಮತ್ತು ಎಂ.ಬಿ.ಬಿ.ಎಸ್ ಕೋರ್ಸಿನಲ್ಲಿ ಶೇ.50ಕ್ಕಿಂತ ಹೆಚ್ಚಿನ ಅಂಕ ಪಡೆದು ವ್ಯಾಸಂಗ ಮಾಡುತ್ತಿರುವ ವಿಕಲಚೇತನ (ದೃಷ್ಟಿದೋಷವುಳ್ಳ, ಮಾನಸಿಕ ಅಸ್ವಸ್ಥತೆ, ಬುದ್ದಿಮಾಂದ್ಯತೆ, ಇನ್ಟಲೆಕ್ಚುಯಲ್ ಡಿಸೆಬಿಲಿಟಿ(ಐ.ಡಿ) ವಿದ್ಯಾರ್ಥಿಗಳನ್ನು ಹೊರತುಪಡಿಸಿ) ಮೆರಿಟ್ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿದಾರರು ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರಬೇಕು. ಆಸಕ್ತ ವಿದ್ಯಾರ್ಥಿಗಳು ಎಂ.ಜಿ.ರಸ್ತೆಯಲ್ಲಿರುವ ಜಿಲ್ಲಾ ವಿಕಲಚೇತನರ ಸಬಲೀಕರಣ ಇಲಾಖೆಯಿಂದ ನಿಗದಿತ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 30ರೊಳಗಾಗಿ ಸಲ್ಲಿಸಬಹುದಾಗಿದೆ. ಹಿಂದಿನ ವರ್ಷದಲ್ಲಿ ಅನುತೀರ್ಣಗೊಂಡಿರುವ ವಿದ್ಯಾರ್ಥಿಗಳು ಲ್ಯಾಪ್‌ಟಾಪ್ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಅರ್ಜಿಯೊಂದಿಗೆ ವಿಕಲಚೇತನರ ವಿಶಿಷ್ಠ ಗುರುತಿನ ಚೀಟಿ(ಯು.ಡಿ.ಐ.ಡಿ), ವಿದ್ಯಾರ್ಹತೆ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬಿ.ಪಿ.ಎಲ್ ಪಡಿತರ ಚೀಟಿ, ವ್ಯಾಸಂಗ ಪ್ರಮಾಣ ಪತ್ರ, ಸರ್ಕಾರ ಅಥವಾ ಇತರೆ ಮೂಲಗಳಿಂದ ಲ್ಯಾಪ್‌ಟಾಪ್ ಪಡೆದಿಲ್ಲದಿರುವ ಬಗ್ಗೆ ಸ್ವಯಂ ಧೃಢೀಕರಣ ಪತ್ರವನ್ನು ಲಗತ್ತಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ: 9901282259 / 0816-2005053 / 2270029ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಶಿಲ್ಪ ಎಂ. ದೊಡ್ಡಮನಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q