ಪಾವಗಡ: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ಎಸ್ ಸಿ/ಎಸ್ ಟಿ ವಿದ್ಯಾರ್ಥಿಗಳಿಗೆ 2026–27ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಗ್ರೇಡ್–1 ಪಾವಗಡ ತಿಳಿಸಿದ್ದಾರೆ.
ಅರ್ಹ ವಿದ್ಯಾರ್ಥಿಗಳು ಕಡ್ಡಾಯವಾಗಿ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಆಫ್ ಲೈನ್ ಅರ್ಜಿ ಸ್ವೀಕರಿಸುವುದಿಲ್ಲ. ಅರ್ಜಿ ಸಲ್ಲಿಸಲು ಕರ್ನಾಟಕ ಸರ್ಕಾರದ ಅಧಿಕೃತ SSP ವಿದ್ಯಾರ್ಥಿವೇತನ ಪೋರ್ಟಲ್ ssp.postmatric.karnataka.gov.in ಅಥವಾ ssp.karnataka.gov.in ಬಳಸಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕರ್ನಾಟಕದ ಸ್ಥಳೀಯ ನಿವಾಸಿಯಾಗಿರಬೇಕು. SC/ST ವರ್ಗದ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಕುಟುಂಬದ ವಾರ್ಷಿಕ ಆದಾಯ ಮಿತಿ ಅನ್ವಯವಾಗಲಿದೆ.
ಹಿಂದಿನ ವರ್ಷ ಉತ್ತಮ ಅಂಕ ಪಡೆದಿರಬೇಕು. ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ RD ನಂಬರ್, SATS ID, ಬ್ಯಾಂಕ್ ಪಾಸ್ಬುಕ್, ಹಿಂದಿನ ವರ್ಷದ ಅಂಕಪಟ್ಟಿ, ಪಾಸ್ಪೋರ್ಟ್ ಸೈಜ್ ಫೋಟೋ. ಅರ್ಜಿ ಸಲ್ಲಿಕೆಯಲ್ಲಿ ತಾಂತ್ರಿಕ ತೊಂದರೆ ಎದುರಾದರೆ ವಿದ್ಯಾರ್ಥಿಗಳು ಪಾವಗಡದ ಸಮಾಜ ಕಲ್ಯಾಣ ಇಲಾಖೆ ಕಚೇರಿ, ಗ್ರೇಡ್–1 ಅನ್ನು ಸಂಪರ್ಕಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೊನೆಯ ದಿನಾಂಕ: 31—01–2027. ಅರ್ಹ ವಿದ್ಯಾರ್ಥಿಗಳು ಕೊನೆಯ ದಿನದವರೆಗೆ ಕಾಯದೇ ಅರ್ಜಿ ಸಲ್ಲಿಸುವಂತೆ ಮನವಿ ಮಾಡಲಾಗಿದೆ.
ವರದಿ: ನಂದೀಶ್ ನಾಯ್ಕ ಪಿ., ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


