ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 10+2 (ಪದವಿ ಪೂರ್ವ) ಮತ್ತು 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ವಯೋಮಾನದ ವಿದ್ಯಾರ್ಥಿಗಳು ಯುಜಿಸಿ ಅನುಮೋದಿತ ಸ್ನಾತಕ(ಯು.ಜಿ)/ಸ್ನಾತಕೋತ್ತರ(ಪಿ.ಜಿ) ಕೋರ್ಸ್ ಗಳಿಗೆ ಪ್ರವೇಶಾತಿ ಪಡೆಯಬಹುದಾಗಿದ್ದು, ಮೈಸೂರಿನ ಕರಾಮುವಿಯ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2024–25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯ ಯುಜಿಸಿ ಅನುಮೋದಿತ ಕೋರ್ಸ್ ಗಳ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ.
ಮೇಲ್ಕಂಡ ಪದವಿಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಭರ್ತಿಮಾಡಿ ನಂತರ ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಆನ್ ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಬಹುದು. ಪ್ರಥಮ ವರ್ಷದ ಪ್ರವೇಶಾತಿಗೆ 2025ರ ಮಾರ್ಚ್ 31 ಕೊನೆಯ ದಿನಾಂಕವಾಗಿದೆ. ಪ್ರಥಮ ವರ್ಷದ ಪ್ರವೇಶಾತಿ ಶುಲ್ಕ ವಿವರ:- ಬಿ.ಎ-ರೂ.8,400/-., ಬಿ.ಕಾಂ.-ರೂ.8,900/-.,ಬಿ.ಬಿ.ಎ/ಬಿ.ಎಲ್.ಐ.ಎಸ್ಸಿ-12,400/-., ಬಿ.ಸಿ.ಎ/ಬಿ.ಎಸ್ಸಿ-ರೂ.23,900/-., ಬಿ.ಎಸ್.ಡಬ್ಲ್ಯೂ-ರೂ.12,900/-., ಎಂ.ಎ-ರೂ.10,600/-., ಎಂ.ಸಿ.ಜೆ-ರೂ.16,200/-., ಎಂ.ಕಾಂ-ರೂ.12,400/-., ಎಂ.ಬಿ.ಎ–ರೂ.29,900/-., ಎಂ.ಎಸ್ಸಿ/ಎಂ.ಸಿ.ಎ-ರೂ.29,700/-., ಎಂ.ಎಸ್.ಡಬ್ಲ್ಯೂ-ರೂ.21,300/-., ಎಂ.ಎಲ್.ಐ.ಎಸ್ಸಿ-ರೂ.18,150/-ಗಳಾಗಿರುತ್ತದೆ.
ಬೋಧನಾ ಶುಲ್ಕ ರಿಯಾಯಿತಿ:
ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ / ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ, ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಪತಿ/ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ, KSRTC/BMTC ನೌಕರರಿಗೆ ಸ್ನಾತಕ/ಸ್ನಾತಕೋತ್ತರ ಪದವಿಗಳ ಬೋಧನಾ ಶುಲ್ಕದಲ್ಲಿ 10% ರಿಯಾಯಿತಿ ಇರುತ್ತದೆ.
ಉಚಿತ ಪ್ರವೇಶಾತಿ:
ಕೋವಿಡ್ ನಿಂದ ಮರಣ ಹೊಂದಿದ ಪೋಷಕ ಮಕ್ಕಳಿಗೆ, ಟ್ರಾನ್ಸ್ ಜೆಂಡರ್ / ತೃತೀಯ ಲಿಂಗಿಗಳಿಗೆ, ದೃಷ್ಟಿ ಹೀನ ವಿದ್ಯಾರ್ಥಿಗಳಿಗೆ (ಬಿ.ಎಡ್/ಎಂ.ಬಿ.ಎ ಹೊರತು ಪಡಿಸಿ) ಉಚಿತ ಪ್ರವೇಶಾತಿ ನೀಡಲಾಗುತ್ತಿದೆ.
ಹೆಚ್ಚಿನ ವಿವರಗಳಿಗಾಗಿ: ಪ್ರಾದೇಶಿಕ ನಿರ್ದೇಶಕರು, ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ರಾಜೀವ್ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು–572105 ದೂರವಾಣಿ ಸಂಖ್ಯೆ- 0816–2955580, 9844506629, 9886112434, 7349474339 ಅನ್ನು ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕರಾದ ಡಾ.ಲೋಕೇಶ ಆರ್. ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4