ತುಮಕೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಖಾಲಿಯಿರುವ ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಒಂದು ಹುದ್ದೆಯನ್ನು ಭರ್ತಿ ಮಾಡಲು ಬೆಂಗಳೂರಿನ ಸಕಾಲ ಮಿಷನ್ ಗೆ ಶಿಫಾರಸ್ಸು ಮಾಡಲಿಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011 ಮತ್ತು (ತಿದ್ದುಪಡಿ) ಅಧಿನಿಯಮ 2014ರ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲಾಡಳಿತಕ್ಕೆ ಸಹಕರಿಸಲು ಈ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಅವಶ್ಯಕತೆಯಿದೆ.
ಅರ್ಜಿ ನಮೂನೆಯನ್ನು http://tumkur.nic.in ನಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯ, ತುಮಕೂರು ಜಿಲ್ಲೆ, ತುಮಕೂರು ಇವರಿಗೆ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ “ಲಕೋಟೆ ಮೇಲೆ ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಯ ಅರ್ಜಿ” ಎಂದು ನಮೂದಿಸಿರಬೇಕು.
ಅರ್ಜಿ ಸಲ್ಲಿಸುವವರು ಬಿ.ಇ./ಬಿ.ಟೆಕ್/ಬಿ.ಸಿ.ಎ. ಪದವಿಯಲ್ಲಿ ಕಂಪ್ಯೂಟರ್ ಸೈನ್ಸ್/ಇನ್ಫಾರ್ ಮೇಷನ್ ಸೈನ್ಸ್ ಇಂಜಿನಿಯರಿಂಗ್/ಎಲೆಕ್ಟ್ರಾನಿಕ್ ಅಂಡ್ ಕಮ್ಯೂನಿಕೇಷನ್ ಟೆಲಿಕಾಂ ವಿದ್ಯಾರ್ಹತೆ ಹೊಂದಿರಬೇಕು. ಸೇವಾನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ಆಯ್ಕೆಯಾದವರಿಗೆ 27,100 ರೂ.ಗಳ ವೇತನ ನೀಡಲಾಗುವುದು.
ಈ ಹುದ್ದೆಯ ಆಯ್ಕೆಯನ್ನು ಅರ್ಹತೆಯ ಆಧಾರದ ಮೇಲೆ ಸಂದರ್ಶನದ ಮೂಲಕ ನಡೆಸಲಾಗುವುದು ಹಾಗೂ ಜಿಲ್ಲಾಡಳಿತದ ನಿರ್ಧಾರವೇ ಅಂತಿಮವಾಗಿರುತ್ತದೆ. ಜಿಲ್ಲಾಡಳಿತದ ಶಿಫಾರಸ್ಸು/ದೃಢೀಕರಣದ ಆಧಾರದ ಮೇರೆಗೆ ಬೆಂಗಳೂರಿನ ಸಕಾಲ ಮಿಷನ್ ಕಚೇರಿಯಿಂದ ನೇಮಕಾತಿ ಆದೇಶ ನೀಡಲು ಕ್ರಮವಹಿಸಲಾಗುವುದು. ಈ ಹಿಂದೆ ಸಕಾಲ ಯೋಜನೆಯಲ್ಲಿ ಕರ್ತವ್ಯ ನಿರ್ವಹಿಸಿದವರಿಗೆ ಆದ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ಏಪ್ರಿಲ್ 2 ಕೊನೆಯ ದಿನವಾಗಿದೆ. ಈ ಹುದ್ದೆಯು ಸರ್ಕಾರದ ಖಾಯಂ ಹುದ್ದೆಯಾಗಿರುವುದಿಲ್ಲ. ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ನಿಗದಿಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಉತ್ತೀರ್ಣಗೊಂಡಿರತಕ್ಕದ್ದು ಹಾಗೂ ಪದವಿ ಪತ್ರವನ್ನು ಹೊಂದಿರತಕ್ಕದ್ದು. ಈ ನೇಮಕಾತಿಯು ತಾತ್ಕಾಲಿಕವಾಗಿದ್ದು, ಸೇವೆಯು ತೃಪ್ತಿಕರವಾಗಿಲ್ಲದಿದ್ದಲ್ಲಿ ಯಾವುದೇ ಮುನ್ಸೂಚನೆ ನೀಡದೇ ನೇಮಕಾತಿಯನ್ನು ರದ್ದುಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4