ತುಮಕೂರು: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮವು ಸ್ವಯಂ ಉದ್ಯೋಗ ಸಾಲ, ಗಂಗಾಕಲ್ಯಾಣ ನೀರಾವರಿ, ಅರಿವು-ಶೈಕ್ಷಣಿಕ ಸಾಲ(ಹೊಸತು ಹಾಗೂ ನವೀಕರಣ), ಸ್ವಯಂ ಉದ್ಯೋಗ ಸಾಲ(ವಾಣಿಜ್ಯ ಬ್ಯಾಂಕ್ ಗಳ ಸಹಯೋಗದೊಂದಿಗೆ), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು, ಸ್ವಾವಲಂಬಿ ಸಾರಥಿ ಯೋಜನೆಗಳಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಒದಗಿಸಲು ಅಂಬಿಗರು, ಬೆಸ್ತರು, ಗಂಗಾಮತಸ್ಥರು ಹಾಗೂ ಅದರ ಉಪಜಾತಿಗೆ ಸೇರಿದವರಿಂದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಆಗಸ್ಟ್ 31ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್: https://ambigaradevelopment.karnataka.gov.in ಅಥವಾ ನಿಗಮದ ದೂ.ವಾ.ಸಂ.080-22864099 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂ.ವಾ.ಸಂ. 0816-2005008ನ್ನು ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಬಿ.ವಿ. ವೆಂಕಟರಾಜು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q