ಕರ್ನಾಟಕ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯ ಮೀಸಲು ಪೊಲೀಸ್ ಪಡೆಗಳಲ್ಲಿ ಅಗತ್ಯ ಇರುವ 1,500 ವಿಶೇಷ ಮೀಸಲು ಪೊಲೀಸ್ ಕಾನ್ಸ್’ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲು ಅವಕಾಶ ನೀಡಿದೆ.
ಈಗಾಗಲೇ ಇಲಾಖೆಯ ವಿವಿಧ ಪಡೆಗಳಲ್ಲಿ ಎಷ್ಟೆಷ್ಟು ಹುದ್ದೆಗಳನ್ನು ಭರ್ತಿ ಮಾಡಬೇಕು ಎಂಬುದರ ಸಮತಳ ವರ್ಗೀಕರಣ ಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ.
ಈ ಹುದ್ದೆಗಳಿಗೆ SSLC ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ. ಪ್ರಮುಖವಾಗಿ ಈ ಕೆಳಗಿನ 3ಹಂತದ ಪರೀಕ್ಷೆಗಳು ನಡೆಯುತ್ತದೆ.
ಸಹಿಷ್ಣುತಾ ಪರೀಕ್ಷೆ : ಉದ್ದ ಜಿಗಿತ / ಎತ್ತರ ಜಿಗಿತ / ಗುಂಡು ಎಸೆತ / ಓಟ.
ದೈಹಿಕ ಸಾಮರ್ಥ್ಯ ಪರೀಕ್ಷೆ : ಕನಿಷ್ಠ ಎತ್ತರ / ಎದೆ ಸುತ್ತಳತೆ.
ಲಿಖಿತ ಸ್ಪರ್ಧಾತ್ಮಕ ಪರೀಕ್ಷೆ : ಬಹು ಆಯ್ಕೆ ಉತ್ತರಗಳ, ಲಿಖಿತ ಪರೀಕ್ಷೆ.
ಲಿಖಿತ ಸ್ಪರ್ಧಾತ್ಮಕ ಪರೀಕ್ಷೆ ಬರೆಯಬೇಕು ಎಂದರೆ ಮೊದಲು ಸಹಿಷ್ಣುತೆ ಹಾಗೂ ದೈಹಿಕ ಸಾಮಾರ್ಥ್ಯ ಪರೀಕ್ಷೆಗಳಲ್ಲಿ ಅರ್ಹತೆ ಪಡೆಯಬೇಕಾಗಿರುತ್ತದೆ. 10 ನೇ ತರಗತಿ ಪಾಸಾಗಿ ಸರ್ಕಾರಿ ಉದ್ಯೋಗದ ಆಸೆಯಲ್ಲಿರುವವರು ಇದಕ್ಕೆ ಅರ್ಜಿ ಸಲ್ಲಿಸಬಹುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA