ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಪ್ರವರ್ಗ–1, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ 2.50 ಲಕ್ಷ ಹಾಗೂ ಪ್ರವರ್ಗ–2ಎ, 2ಬಿ, 3ಎ, 3ಬಿ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ 1 ಲಕ್ಷ ರೂ. ಮಿತಿಯೊಳಗಿರಬೇಕು.
ಅರ್ಹ ವಿದ್ಯಾರ್ಥಿಗಳು ಸೆಪ್ಟೆಂಬರ್ 30ರೊಳಗಾಗಿ ಅರ್ಜಿಯನ್ನು ಜಾಲತಾಣ: https://shp.karnataka.gov.in/bcwd ಮೂಲಕ ಸಲ್ಲಿಸಬಹುದಾಗಿದೆ. ತಾಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ, ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಾಲತಾಣ: https://bcwd.karnataka.gov.in/ ಅನ್ನು ಸಂಪರ್ಕಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಅಂಚೆ: bcwd-helpline@gmail.com ಮೂಲಕ ಅಥವಾ ಜಿಲ್ಲಾ/ ತಾಲೂಕು ಮಟ್ಟದ ಇಲಾಖಾಧಿಕಾರಿಗಳನ್ನು ಸಂಪರ್ಕಿಸ ಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಹಾಯವಾಣಿ ಸಂಖ್ಯೆ: 8050770004 ನ್ನು ಸಂಪರ್ಕಿಸಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
