ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಯುಜಿಸಿ ಅನುಮೋದಿತ ಕೋರ್ಸ್ ಗಳ ಜುಲೈ ಆವೃತ್ತಿಯ ಸ್ನಾತಕ/ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ತುಮಕೂರು ಪ್ರಾದೇಶಿಕ ನಿರ್ದೇಶಕ ಡಾ. ಆರ್. ಲೋಕೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತರು ಸ್ನಾತಕ/ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ.. ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಲ್.ಐ.ಎಸ್ಸಿ., ಬಿ.ಎಸ್ಸಿ., ಎಂ.ಎ.. ಎಂ.ಸಿ.ಜೆ., ಎಂ.ಕಾಂ., ಎಂ.ಎಲ್.ಐ.ಎಸ್ಸಿ, ಎಂ.ಬಿ.ಎ., ಬಿ.ಎಸ್.ಡಬ್ಲ್ಯೂ/ಎಂ.ಎಸ್.ಡಬ್ಲ್ಯೂ/ಎA.ಸಿ.ಎ. ಹಾಗೂ ಪಿ.ಜಿ. ಸರ್ಟಿಫಿಕೇಟ್, ಡಿಪ್ಲೋಮಾ ಸರ್ಟಿಫಿಕೇಟ್ ಪ್ರೋಗ್ರಾಮ್ ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ತುಮಕೂರು ಕರಾಮುವಿ ಪ್ರಾದೇಶಿಕ ಕೇಂದ್ರ ನಿರ್ದೇಶಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ: ೦೮೧೬-೨೯೫೫೫೮೦, ಮೊ.ಸಂ: ೯೮೪೪೫೦೬೬೨೯, ೯೮೮೬೧೧೨೪೩೪, ೭೩೪೯೪೭೪೩೩೯ನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q