nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ
    • ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ
    • ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ
    • “ನಾನ್ ನಾಳೆ ಇರ್ತೀನೋ ಇಲ್ವೋ ಗೊತ್ತಿಲ್ಲ”: ಬಾಯ್ ಫ್ರೆಂಡ್ ಸಾವಿನ ಬಗ್ಗೆ ಬಿಗ್ ಬಾಸ್ ಸೋನು ಗೌಡ ಕಣ್ಣೀರು!
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ರಿಕೋದ್ಯಮ ಪದವಿ/ ಸ್ನಾತಕೋತ್ತರ ಪದವೀಧರರಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
    ತುಮಕೂರು November 6, 2024

    ಪತ್ರಿಕೋದ್ಯಮ ಪದವಿ/ ಸ್ನಾತಕೋತ್ತರ ಪದವೀಧರರಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

    By adminNovember 6, 2024No Comments2 Mins Read
    training from journalism

    ತುಮಕೂರು:  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2024-25ನೇ ಸಾಲಿಗೆ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಹೊಂದಿರುವ ಇಬ್ಬರು ಅಭ್ಯರ್ಥಿಗಳಿಗೆ ತುಮಕೂರು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಕಚೇರಿಯಲ್ಲಿ ಒಂದು ವರ್ಷದ ಅವಧಿಗೆ ಅಪ್ರೆಂಟಿಸ್ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

    ಈ ತರಬೇತಿಯು 2025ನೇ ದಿನದರ್ಶಿ(ಕ್ಯಾಲೆಂಡರ್)ಯ ಜನವರಿ ಮಾಹೆಯಿಂದ ಪ್ರಾರಂಭಗೊಂಡು ಡಿಸೆಂಬರ್ 2025ಕ್ಕೆ ಕೊನೆಗೊಳ್ಳಲಿದೆ. ರಾಜ್ಯದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದ, ಕಂಪ್ಯೂಟರ್ ಜ್ಞಾನ ಇರುವ, ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.


    Provided by
    Provided by

    ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಸಂದರ್ಶನದ ಮೂಲಕ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುವುದು. ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದಂದು 35 ವರ್ಷ ಮೀರಿರಬಾರದು.

    ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ “ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ” ಎಂದು ನಮೂದಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.

    ಅಭ್ಯರ್ಥಿಗಳು ಪದವಿ/ಸ್ನಾತಕೋತ್ತರ ಅಂತಿಮ ವರ್ಷದ ಪದವಿ ಅಂಕಪಟ್ಟಿಯೊAದಿಗೆ ಅರ್ಜಿ ಸಲ್ಲಿಸಬೇಕು. ಅಂಕಪಟ್ಟಿಯನ್ನು ನಿರೀಕ್ಷಿಸಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ತರಬೇತಿ ಅವಧಿಯಲ್ಲಿ ಮಾಹೆಯಾನ 15ಸಾವಿರ ರೂ. ಗಳ ಶಿಷ್ಯವೇತನ ನೀಡಲಾಗುವುದು. ಈ ತರಬೇತಿಯು ತಾತ್ಕಾಲಿಕವಾಗಿರುತ್ತದೆ. ತರಬೇತಿ ಮುಗಿದ ನಂತರ ಮುಂದುವರೆಸಲು ಅಥವಾ ಖಾಯಂಗೊಳಿಸುವಂತೆ ಒತ್ತಡ ತರುವಂತಿಲ್ಲ. ತರಬೇತಿ ಅವಧಿಯಲ್ಲಿ ಬೇರೆ ಉದ್ಯೋಗ ಮಾಡಲು ಅವಕಾಶವಿಲ್ಲ. ತರಬೇತಿ ಮಧ್ಯದಲ್ಲಿ ಬಿಟ್ಟುಹೋದರೆ ಅವಧಿಗೆ ಮುನ್ನ ದಾಖಲಾತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಸರ್ಕಾರಿ/ಖಾಸಗಿ ಸಂಸ್ಥೆಯಲ್ಲಿ ಖಾಯಂ ಉದ್ಯೋಗ ಸಿಕ್ಕಿದಲ್ಲಿ ಷರತ್ತಿಗೊಳಪಟ್ಟು ಮೂಲ ದಾಖಲಾತಿಗಳನ್ನು ಹಿಂದಿರುಗಿಸಲಾಗುವುದು.

    ಒಮ್ಮೆ ಫಲಾನುಭವಿಯಾದವರನ್ನು ಈ ತರಬೇತಿಯ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ. ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಮೇಲ್ಕಂಡ ಷರತ್ತುಗಳನ್ನು ಪಾಲಿಸುವುದಾಗಿ ಆಯ್ಕೆಯಾದ ಅಭ್ಯರ್ಥಿಗಳು 20ರೂ.ಗಳ ಛಾಪಾ ಕಾಗದದಲ್ಲಿ ಲಿಖಿತವಾಗಿ ಹೇಳಿಕೆ ನೀಡಬೇಕು. ಅರ್ಜಿಯೊಂದಿಗೆ ಎಸ್‌ ಎಸ್‌ ಎಲ್‌ ಸಿ ಅಂಕಪಟ್ಟಿ, ಪದವಿ/ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ 2 ಭಾವಚಿತ್ರ ಹಾಗೂ ಆಧಾರ್ ಕಾರ್ಡ್, ವಿಳಾಸದ ದೃಢೀಕರಣ ದಾಖಲೆ ಸೇರಿದಂತೆ ಇನ್ನಿತರೆ ಪೂರಕ ದಾಖಲೆಗಳನ್ನು ದ್ವಿ–ಪ್ರತಿಯಲ್ಲಿ ಸಲ್ಲಿಸಲು ನವೆಂಬರ್ 25 ಕಡೆ ದಿನವಾಗಿರುತ್ತದೆ.

    ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕ, ಬಾಳನಕಟ್ಟೆ, ತುಮಕೂರು ಇವರನ್ನು ಸಂಪರ್ಕಿಸಬೇಕೆಂದು ಹಿರಿಯ ಸಹಾಯಕ ನಿರ್ದೇಶಕ ಹಿಮಂತರಾಜು ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ

    April 13, 2026

    ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ

    April 13, 2026

    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ಚಿಕ್ಕಮಗಳೂರು: ಜಿಲ್ಲೆಯ ಹೆಬ್ಬಳ್ಳಿ ಗ್ರಾಮದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಸೀರೆಯ ಜೋಕಾಲಿ ಆಕಸ್ಮಿಕವಾಗಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ಉಸಿರುಗಟ್ಟಿ…

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026

    ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ

    April 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.