ತುಮಕೂರು: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ವತಿಯಿಂದ ಕಳೆದ 5 ವರ್ಷಗಳಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆ ಹಾಗೂ ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರಿಗೆ ಕಿತ್ತೂರುರಾಣಿ ಚೆನ್ನಮ್ಮ ಪ್ರಶಸ್ತಿ ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ಮಹಿಳೆಗೆ ವೀರ ಮಹಿಳೆ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು ಇವರ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಪೂರಕ ದಾಖಲಾತಿಗಳೊಂದಿಗೆ ಡಿಸೆಂಬರ್ 24ರೊಳಗಾಗಿ ನೇರವಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816–2956624ನ್ನು ಸಂಪರ್ಕಿಸಬಹುದಾಗಿದೆ. ಎಂದು ಇಲಾಖೆಯ ಉಪನಿರ್ದೇಶಕ ಡಾ. ಸಿದ್ದರಾಮಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


