ತುಮಕೂರು: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ನೀಡಲು ಉಪ್ಪಾರ ಜನಾಂಗದವರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರ ಸಾಲ, ಅರಿವು–ಶೈಕ್ಷಣಿಕ ಸಾಲ(ನೂತನ–ನವೀಕರಣ), ವಿದೇಶಿ ವ್ಯಾಸಂಗ ಸಾಲ ಯೋಜನೆ(ನೂತನ–ನವೀಕರಣ), ಸ್ವಾವಲಂಬಿ ಸಾರಥಿ, ಭಗೀರಥ ಗಂಗಾಕಲ್ಯಾಣ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
2024–25 ಮತ್ತು 2025–26ನೇ ಸಾಲುಗಳಲ್ಲಿ ಅರ್ಜಿ ಸಲ್ಲಿಸಿರುವ ಅರ್ಜಿದಾರರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯತೆ ಇರುವುದಿಲ್ಲ. ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 0816–2005008ನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
