ತುಮಕೂರು: ಗುಬ್ಬಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ತಾಲ್ಲೂಕು ಮಟ್ಟದ ಸಲಹಾ ಸಮಿತಿ ಸದಸ್ಯತ್ವಕ್ಕಾಗಿ ಗುಬ್ಬಿ ತಾಲ್ಲೂಕಿನ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ನಿಗದಿತ ಅರ್ಜಿ ನಮೂನೆಯನ್ನು ಡಿ.ದೇವರಾಜ ಅರಸು ಭವನ, ಮಾರುತಿ ನಗರ, 6ನೇ ಅಡ್ಡರಸ್ತೆ, ರೈಲ್ವೇ ಸ್ಟೇಷನ್ ರಸ್ತೆ, ಗುಬ್ಬಿ ಪಟ್ಟಣ–572216 ಈ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಜನವರಿ 31ರೊಳಗಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ : bceogubbi@gmail.com ಅಥವಾ ದೂ.ವಾ.ಸಂ. 08131–222456ನ್ನು ಸಂಪರ್ಕಿಸಬಹುದಾಗಿದೆ ಎಂದು ಗುಬ್ಬಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx