ತುಮಕೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ Mo—Jo—Kit ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಜಿದಾರರು ಈ ಕೆಳಕಂಡ ಷರತ್ತು ಗೊಳಪಟ್ಟು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿದಾರರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಾಗಿರಬೇಕು ಅಥವಾ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಅಥವಾ ಉಪಗ್ರಹ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು.
ಮಾಧ್ಯಮ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಅನುಭವವಿರಬೇಕು ಹಾಗೂ ಇದಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಒದಗಿಸಬೇಕು. ಪತ್ರಿಕೆಯ ಸಂಪಾದಕರಾಗಿದ್ದಲ್ಲಿ ಪತ್ರಿಕೆಯು ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರಿರಬೇಕು.
ಅರ್ಜಿದಾರರು ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತಾವು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಮುಖ್ಯಸ್ಥರಿಂದ ಸೇವಾ ದೃಢೀಕರಣ ಪತ್ರ ಸಲ್ಲಿಸಬೇಕು. ಈ ಹಿಂದೆ ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ ಹಾಗೂ ಇತರೆ ಸರ್ಕಾರಿ ಸಂಸ್ಥೆಗಳಿಂದ ಸೌಲಭ್ಯ ಪಡೆದ ಫಲಾನುಭವಿಗಳಾಗಿದ್ದರೆ, ಅರ್ಜಿ ಸಲ್ಲಿಸುವಂತಿಲ್ಲ.
ಪತ್ರಿಕೆಯು ನಿರಂತರವಾಗಿ ಪ್ರಕಟಗೊಳ್ಳುತ್ತಿದ್ದು, ಪತ್ರಿಕೆ ಮೇಲಾಗಲಿ ಹಾಗೂ ಸಂಪಾದಕರ ಮೇಲಾಗಲಿ ಯಾವುದೇ ರೀತಿಯ ಕ್ರಿಮಿನಲ್ ಅಪರಾಧ ಮೊಕದ್ದಮೆಗಳು ಇರಬಾರದು. ಸರ್ಕಾರದ ವಿವಿಧ ಸಮಿತಿ/ ಸಂಸ್ಥೆಗಳಿಗೆ ನೇಮಕ ಮಾಡಿದ ನಾಮ ನಿರ್ದೇಶಿತ ಸದಸ್ಯರುಗಳನ್ನು ಪರಿಗಣಿಸಲಾಗುವುದಿಲ್ಲ.
ಅಭ್ಯರ್ಥಿಗಳು ಸ್ವಯಂ ಅರ್ಜಿಗಳೊಂದಿಗೆ ಪೂರಕ ದಾಖಲೆಗಳನ್ನು ದಿನಾಂಕ: 20.03.2025 ರೊಳಗಾಗಿ ಇ-ಮೇಲ್ ವಿಳಾಸ: karnatakamediaacademy@gmail.comಗೆ ಸಲ್ಲಿಸಬೇಕು ಅಥವಾ ಅಂಚೆ ವಿಳಾಸ: ಕಾರ್ಯದರ್ಶಿಗಳು, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ|| ಬಿ.ಆರ್.ಅಂಬೇಡ್ಕರ್ ವೀದಿ, ಬೆಂಗಳೂರು-560001 ಇಲ್ಲಿಗೆ ಅರ್ಜಿಗಳನ್ನು ಕಳುಹಿಸಬೇಕೆಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ ಸಹನಾ ಎಂ. ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4