ತುಮಕೂರು: ಬೆಂಗಳೂರು ನಿಮ್ಹಾನ್ಸ್ ಎಪಿಡೀಮಿಯಾಲಜಿ ವಿಭಾಗ ಜನ ಆರೋಗ್ಯ ಕೇಂದ್ರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಅನುಷ್ಟಾನಗೊಂಡಿರುವ ಯುವ ಸ್ಪಂದನ ಕಾರ್ಯಕ್ರಮದಡಿ ಕಾರ್ಯನಿರ್ವಹಿಸಲು ಹೊಸದಾಗಿ ಯುವ ಪರಿವರ್ತಕರ ಆಯ್ಕೆಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪಾವಗಡ, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ತಿಪಟೂರು, ಸಿರಾ ಹಾಗೂ ಮಧುಗಿರಿ ಸೇರಿದಂತೆ 6 ತಾಲ್ಲೂಕುಗಳಿಗೆ ಯುವ ಪರಿವರ್ತಕರ ಆಯ್ಕೆ ಮಾಡಲಾಗುವುದು. ಯಾವುದೇ ಪದವಿ ಹಾಗೂ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ 21 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಮೂಲ ದಾಖಲೆಗಳೊಂದಿಗೆ ಫೆಬ್ರವರಿ 28ರೊಳಗಾಗಿ ಸಹಾಯಕ ನಿರ್ದೇಶಕ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ, ತುಮಕೂರು ಇವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 8549890509/ 9513073714ನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4